ಬೆಂಗಳೂರು: ಕೆಪಿಸಿಸಿಗೆ ನೂತನ ಅಧ್ಯಕ್ಷರ ಆಯ್ಕೆಯಾಗಬೇಕು ಎಂದು ಬುಧವಾರ ಆಗ್ರಹಿಸಿದ್ದ ಸತೀಶ್ ಜಾರಕಿಹೊಳಿ ಇದೀಗ ಹೈಕಮಾಂಡ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ಹೊಡೆದಿದ್ದಾರೆ.
ಬುಧವಾರ ರಾತ್ರಿ ಸಾಮಾಜಿಕ ಮಾಧ್ಯಮ ಫೇಸ್ಬುಕ್ ಮೂಲಕ ಸ್ಪಷ್ಟೀಕರಣ ನೀಡಿದ ಅವರು, ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಡಿ.ಕೆ. ಶಿವಕುಮಾರ್ ಬದಲಾವಣೆಗೆ ಆಗ್ರಹಿಸಿಲ್ಲ ಎಂದಿದ್ದಾರೆ.
ಮಾಧ್ಯಮ ವರದಿಗಳ ಬಗ್ಗೆ ಗಮನಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕು, ಡಿಕೆ ಶಿವಕುಮಾರ್ ವಿರುದ್ಧ ಸಾಹುಕಾರ್ ಸಮರ ಎಂದೆಲ್ಲ ವರದಿಗಳಾಗಿವೆ. ಹೀಗಾಗಿ ಆ ಬಗ್ಗೆ ಸ್ಪಷ್ಟೀಕರಣ ಕೊಡಬೇಕಾಗಿ ಬಂದಿದೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx