nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    ರಾಜ್ಯ ಸುದ್ದಿ May 31, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    By adminMay 31, 2026No Comments2 Mins Read
    d k shivakumar

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಕೊನೆಗೂ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

    ವಿಧಾನಸೌಧದಲ್ಲಿ ನಡೆದ ಮಹತ್ವದ ಸಿಎಲ್‌ಪಿ ಸಭೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿಕೃತವಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಪ್ರಸ್ತಾಪಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.


    Provided by
    Provided by

    ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ತಕ್ಷಣವೇ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು. ಶಾಸಕರ ಬೆಂಬಲ ಪತ್ರವನ್ನು ಹಸ್ತಾಂತರಿಸಿ ಹೊಸ ಸರ್ಕಾರ ರಚನೆಗೆ ಅಧಿಕೃತವಾಗಿ ಹಕ್ಕು ಮಂಡಿಸಿದರು. ಇದನ್ನು ಪುರಸ್ಕರಿಸಿದ ರಾಜ್ಯಪಾಲರು, ಸರ್ಕಾರ ರಚಿಸುವಂತೆ ಡಿಕೆಶಿ ಅವರಿಗೆ ಆಹ್ವಾನ ನೀಡಿದ್ದಾರೆ. ಇದರೊಂದಿಗೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಖಚಿತವಾಗಿದೆ.

    ಡಿ.ಕೆ. ಶಿವಕುಮಾರ್ ಅವರು ಜೂನ್ 3ರ ಬುಧವಾರದಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ. ಲೋಕಭವನದ ಗಾಜಿನ ಮನೆ, ಕಂಠೀರವ ಕ್ರೀಡಾಂಗಣ ಅಥವಾ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಈ ಅದ್ಧೂರಿ ಸಮಾರಂಭವನ್ನು ಆಯೋಜಿಸಲು ಸಿದ್ಧತೆಗಳು ನಡೆದಿವೆ.

    ಸಿದ್ದರಾಮಯ್ಯ ಅವರ ಕೊನೆಯ ಜನತಾ ದರ್ಶನ: ಸಿಎಂ ಹುದ್ದೆಯಿಂದ ನಿರ್ಗಮಿಸುವ ಮುನ್ನ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲುಗಳನ್ನು ಆಲಿಸಿದರು. ತದನಂತರ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದರು.

    ತೀವ್ರಗೊಂಡ ಸಚಿವ ಸ್ಥಾನದ ಲಾಬಿ: ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಹೊಸ ಸಚಿವ ಸಂಪುಟ ಸೇರಲು ಕಾಂಗ್ರೆಸ್ ಶಾಸಕರು ಭಾರಿ ಕಸರತ್ತು ನಡೆಸುತ್ತಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳು ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.