ಬೆಂಗಳೂರು: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿದ್ದಾರೆ.
ಈ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಮನೆಗೆ ಆಗಮಿಸಿದ ಸೂರಜ್ ರೇವಣ್ಣ ಡಿ.ಕೆ.ಶಿವಕುಮಾರ್ ರಹಸ್ಯ ಮಾತುಕತೆ ನಡೆಸಿದ್ದಾರೆ.
ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸೂರಜ್, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಉಪ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಯಿತು ಎಂದು ಹೇಳಿದ್ದಾರೆ.
ಜಿಲ್ಲೆಯ ಪ್ರತಿನಿಧಿಯಾಗಿ ಅಭಿವೃದ್ಧಿ ಕಾರ್ಯಗಳ ಕುರಿತ ಅವರನ್ನು ಭೇಟಿ ಮಾಡುವುದು ಅಗತ್ಯವಿದೆ. ಹೀಗಾಗಿ ಭೇಟಿ ಮಾಡಲಾಯಿತು ಅಂತಾ ಅವರು ತಿಳಿಸಿದ್ದಾರೆ.


