ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ ಮತ್ತು ಬರಗಾಲದ ಪರಿಸ್ಥಿತಿಯನ್ನು ರಾಜಕೀಯಗೊಳಿಸದಂತೆ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರೈತರ ಬೆಂಬಲಕ್ಕೆ ನಿಲ್ಲಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಮಂಗಳವಾರ ಈ ಕುರಿತು ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ತೀವ್ರ ಬರಗಾಲ, ಕುಡಿಯುವ ನೀರಿನ ಸಮಸ್ಯೆ ಹಾಗೂ ವಿದ್ಯುತ್ ಕೊರತೆ ಎದುರಾಗುವ ಸಾಧ್ಯತೆಯಿದೆ. ಹಾಗೆಂದು ರೈತರು ಅಥವಾ ಶಾಸಕರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರದಿಂದ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ರೈತರ ಸಮಸ್ಯೆಗಳನ್ನು ನೇರವಾಗಿ ಅರಿತುಕೊಳ್ಳಲು ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆಯಲಾಗುತ್ತಿದ್ದು, ರೈತರ ಜೊತೆ ಚರ್ಚಿಸಿ ಅಗತ್ಯ ಪರಿಹಾರ ಹಾಗೂ ಘೋಷಣೆಗಳನ್ನು ಮಾಡಲಾಗುವುದು ಎಂದು ಅವರು ತಿಳಿಸಿದರು.
ಇದೇ ವೇಳೆ, ರಾಜಕೀಯ ಪಕ್ಷಗಳು ಮಳೆ ಕೊರತೆಯ ವಿಚಾರವನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಅಥವಾ ಗ್ರಾಮೀಣ ಜನರಲ್ಲಿ ಆತಂಕ ಸೃಷ್ಟಿಸುವ ಕೆಲಸ ಮಾಡಬಾರದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
