ತುಮಕೂರು ಜಿಲ್ಲೆ ಕಾಡು ಸಿದ್ದೇಶ್ವರ ಮಠಕ್ಕೆ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು. ಈ ವೇಳೆ ತುರುವೇಕೆರೆ ಕ್ಷೇತ್ರದ ನೂತನ ಶಾಸಕ ಜೆಡಿಎಸ್ ಪಕ್ಷದ ಎಂ.ಟಿ.ಕೃಷ್ಣಪ್ಪನವರು ಡಿ.ಕೆ.ಶಿವಕುಮಾರ್ ಅವರಿಗೆ ಹಾರ ಹಾಕುವ ಮೂಲಕ ಅಭಿನಂದಿಸಿದರು.
ತುರುವೇಕೆರೆ ಪಟ್ಟಣದಲ್ಲಿರುವ ಕ್ರೀಡಾಂಗಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಡಿ.ಕೆ.ಶಿವಕುಮಾರ್ ಬಂದಿಳಿದರು. ಈ ವೇಳೆ ಡಿಕೆಶಿ ಅಭಿಮಾನಿಗಳು ಕಾರ್ಯಕರ್ತರು ಹರ್ಷೋದ್ಘಾರ ಮಾಡಿ ಜೈಕಾರ ಕೂಗಿದರು.
ಇದೇ ವೇಳೆ ಅಭಿಮಾನಿಗಳು ಮತ್ತು ಕಾಂಗ್ರೆಸ್ ಮುಖಂಡರುಗಳು ಹಾರ ಮತ್ತು ಶಾಲು ಹಾಕಿ ಸ್ವಾಗತಿಸಿದರು. ಬಳಿಕ ಅಭಿಮಾನಿಗಳತ್ತ ಕೈಬೀಸಿದ ಡಿ.ಕೆ.ಶಿವಕುಮಾರ್ ಕಾರ್ ಹತ್ತಿ ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದತ್ತ ಪ್ರಯಾಣ ಬೆಳೆಸಿದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy