ಹೊಸಕೋಟೆ : ಡಿ.ಕೆ.ಶಿವಕುಮಾರ್ ರನ್ನು ಸೋಲಿಸಲು 500 ಕೋಟಿ ರೂಪಾಯಿ ಸುಪಾರಿ ಕೊಟ್ಟಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸದ್ಯ ಎರಡು ಬಣಗಳಿದ್ದು, ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಕಾಂಗ್ರೆಸ್ ಆಗಿದ್ದು, ಡಿ.ಕೆ. ಶಿವಕುಮಾರ್ ನನ್ನು ಸೋಲಿಸಲು 500 ಕೋಟಿ ರೂ. ಸುಪಾರಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಡಿ. ಕಾಂಗ್ರೆಸ್ ಸೋಲಿಸಲು ಎಸ್. ಕಾಂಗ್ರೆಸ್ 500 ಕೋಟಿ ರೂ. ಸುಪಾರಿ ನೀಡಲಾಗಿದೆ. ಕಾಂಗ್ರೆಸ್ ನಲ್ಲಿ ಡಿ ಕಾಂಗ್ರೆಸ್ ವರ್ಸಸ್ ಎಸ್ ಕಾಂಗ್ರೆಸ್ ಆಗಿದೆ. ಇವರಿಬ್ಬರಿಂದ ಬಿಜೆಪಿಗೆ ಲಾಭವಾಗಲಿದೆ. ಅಮಿತ್ ಶಾ ಮತ್ತೆ ರಾಜ್ಯಕ್ಕೆ ಬರ್ತಿದ್ದಾರೆ. ಫೆಬ್ರವರಿ ಮೊದಲ ವಾರದಲ್ಲಿ ಮೋದಿ ರಾಜ್ಯಕ್ಕೆ ಬರಲಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


