ಕಾಂಗ್ರೆಸ್ ಹೈಕಮಾಂಡ್ ಗೆ ಜಟಿಲವಾಗಿ ಪರಿಣಮಿಸಿದ್ದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟನ್ನು ಬಗೆಹರಿಸಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬೀಡುಬಿಟ್ಟಿದ್ದ ರಾಜ್ಯ ಕಾಂಗ್ರೆಸ್ ಮುಖಂಡರುಗಳು ಇಂದು ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೈಕಮಾಂಡ್ ಸೂಚನೆಯ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಸಭೆಗೆ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗು ಸಂಸದರುಗಳು ಆಗಮಿಸಬೇಕೆಂದು ಡಿಕೆಶಿ ಸೂಚಿಸಿದ್ದಾರೆ.
ಸಾಕಷ್ಟು ಪರ – ವಿರೋಧ ಚರ್ಚೆಗಳು, ಬರಲಿರುವ ಲೋಕಸಭಾ ಚುನಾವಣೆ ಸೇರಿದಂತೆ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನೇಮಕಾತಿಗೆ ಹೈಕಮಾಂಡ್ ಒಪ್ಪಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಷದ ಹೈಕಮಾಂಡ್ ಕೊನೆಗೂ ಮನವೊಲಿಸಿ ಮುಖ್ಯಮಂತ್ರಿ ನೇಮಕದ ಬೇಡಿಕೆಯೊಂದನ್ನು ಹೊರತುಪಡಿಸಿ ಉಳಿದ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದೆ ಎಂದು ಹೇಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


