ರಾಜಕೀಯ ದ್ವೇಷದಿಂದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಚಾಕು ಇರಿದ ಪ್ರಕರಣ ಕುಣಿಗಲ್ ತಾಲ್ಲೂಕಿನ ನಡೇಮಾವಿನಪುರದಲ್ಲಿ ನಡೆದಿದೆ.
ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದಕ್ಕೆ ಚಾಕು ಇರಿಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ವೆಂಕಟಗೌಡನಪಾಳ್ಯದ ಕೀರ್ತಿ ಹಲ್ಲೆಗೊಳಗಾದ ಕಾಂಗ್ರೆಸ್ ಮುಖಂಡ ಎಂದು ತಿಳಿದು ಬಂದಿದೆ. ಚಂದ್ರ, ಜಗದೀಶ್ ಹಾಗೂ ಸುನೀಲ್ ಎಂಬ ಮೂವರು, ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆಗೆ ಯಾಕೆ ತೆರಳಿದ್ದೆ ಎಂದು ಕೀರ್ತಿಯವರ ಬಳಿ ಜಗಳ ಆರಂಭಿಸಿದ್ದಾರೆ.
ಬಳಿಕ ಮೂವರು ಸೇರಿ ಕೀರ್ತಿ ಮೇಲೆ ಚಾಕು, ದೊಣ್ಣೆಯಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಚಾಕು ಇರಿತದಿಂದ ಗಾಯಗೊಂಡ ಕೀರ್ತಿಯನ್ನು ಕುಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296