ರಾಮನಗರ ತಾಲೂಕಿನ ಬಿಡದಿ ಬಳಿ ಕೆಂಚನಗುಪ್ಪೆಯಲ್ಲಿ ಡಿಕೆ ಸುರೇಶ್ ಪರ ಬೆಟ್ಟಿಂಗ್ ಆಡಿದ್ದ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ. 40 ವರ್ಷದ ಶಿವರಾಜ್ ಮೃತ ವ್ಯಕ್ತಿ ಎನ್ನಲಾಗಿದೆ. ಡಿ.ಕೆ.ಸುರೇಶ್ ಪರವಾಗಿ 50 ಲಕ್ಷಕ್ಕೂ ಹೆಚ್ಚು ರೂ. ಬೆಟ್ಟಿಂಗ್ ಕಟ್ಟಿ ಶಿವರಾಜ್ ಸೋತಿದ್ದ. ಆದರೆ ಲಕ್ಷಾಂತರ ಹಣ ಕೊಡಲಾಗದೇ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕಳೆದ ಬಾರಿ ಕರ್ನಾಟಕದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಸದ್ದು ಮಾಡಿತ್ತು. ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಎನ್ನುವ ಲೆವಲ್ಗೆ ಸದ್ದು ಮಾಡಿತ್ತು. ಈ ಭಾರೀ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸದ್ದು ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


