ರಾಮನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ ಡಿ.ಕೆ. ಸುರೇಶ್ ತಮ್ಮ ಆಸ್ತಿ ವಿವರ ಘೋಷಣೆ ಮಾಡಿಕೊಂಡಿದ್ದಾರೆ.
ಭರ್ಜರಿ ರೋಡ್ ಶೋ ನಡೆಸಿದ ಡಿ.ಕೆ. ಸುರೇಶ್ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ನಾಮಪತ್ರ ಅಫಿಡವಿಟ್ ನಲ್ಲಿ ಡಿ.ಕೆ. ಸುರೇಶ್ ಅವರು ಬರೋಬ್ಬರಿ 593.04 ಕೋಟಿ ರೂ. ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ.
ಡಿ.ಕೆ. ಸುರೇಶ್ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ (2019ರಲ್ಲಿ) ಆಸ್ತಿ ಮೌಲ್ಯ 333.86 ಕೋಟಿ ರೂಪಾಯಿ ಇದೆ ಎಂದು ಘೋಷಿಸಿಕೊಂಡಿದ್ದರು. ಅಲ್ಲದೇ 8 ತಿಂಗಳ ಹಿಂದೆ ಅಷ್ಟೇ ಸುರೇಶ್ ಅವರು ವಿಧಾನಸಭೆ ಚುನಾವಣೆ ವೇಳೆ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಆ ವೇಳೆ ತಮ್ಮ ಹೆಸರಿನಲ್ಲಿ ಒಟ್ಟು ಆಸ್ತಿ ಮೌಲ್ಯ 353.7 ಕೋಟಿ ರೂ. ಎಂದು ಘೋಷಿಸಿಕೊಂಡಿದ್ದರು. ಇದೀಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಡಿ.ಕೆ. ಸುರೇಶ್ ಒಟ್ಟು 593.04 ಕೋಟಿ ರೂ. ಮೌಲ್ಯದ ಆಸ್ತಿ ಇದೆ ಎಂದು ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಅಫಿಡವಿಟ್ ನಲ್ಲಿ ತಾವೊಬ್ಬ ಕೃಷಿಕ, ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ ಎಂದು ಹೇಳಿದ್ದಾರೆ. ಇನ್ನು ಡಿ.ಕೆ. ಸುರೇಶ್ ಹೆಸರಿನಲ್ಲಿ ಒಟ್ಟು150 ಕೋಟಿ ರೂಪಾಯಿ ಸಾಲ ಇದೆ ಎಂದು ಅಫಿಡವಿಟ್ ನಲ್ಲಿ ತೋರಿಸಲಾಗಿದೆ. ವಿವಿಧ ನ್ಯಾಯಾಲಯಗಳಲ್ಲಿ ಪ್ರಕರಣ ವಿಚಾರಣೆಯಲ್ಲಿದೆ. ಪತ್ನಿ ಕಾಲಂ ಮುಂದೆ ವಿಚ್ಛೇದನವಾಗಿದೆ ಹೀಗಾಗಿ ಸಂಬಂಧಿಸಿಲ್ಲವೆಂದು ಉಲ್ಲೇಖಿಸಲಾಗಿದೆ. ಪುತ್ರ ಕೇಶಿನ್ ಸುರೇಶ್ ನನಗೆ ಅವಲಂಬಿತನಲ್ಲ ಎಂದು ಉಲ್ಲೇಖಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296