2017-18ರಲ್ಲಿ ಕೇಂದ್ರ ಸರ್ಕಾರದಿಂದ ನಮಗೆ ಬರುವ ನಮ್ಮ ತೆರಿಗೆ ಪಾಲು 31,752 ಕೋಟಿ ಇತ್ತು. 2022-23ರಲ್ಲಿ 34,596 ಕೋಟಿ, ಮುಂದಿನ ವರ್ಷ 37,252 ಕೋಟಿ ಬರಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಸಂಗ್ರಹ ಮತ್ತು ಬಜೆಟ್ ಗಾತ್ರಕ್ಕೆ ಹೋಲಿಸಿದರೆ ಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆಯಲ್ಲಿ ನಮಗೆ ದೊಡ್ಡ ಅನ್ಯಾಯವಾಗುತ್ತಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಬರುವ ಹಣ 2017-18ರಲ್ಲಿ 12,389 ಕೋಟಿ ಇತ್ತು. 2022-23ರಲ್ಲಿ 12,391 ಕೋಟಿ. ಮುಂದಿನ ವರ್ಷಕ್ಕೆ 13,005 ಕೋಟಿ. ನಮಗೆ ಒಟ್ಟು ನಮ್ಮ ತೆರಿಗೆ ಪಾಲು, ಕೇಂದ್ರದ ಸಹಾಯಧನ ಸೇರಿ 50,257 ಕೋಟಿ ಬರಲಿದೆ.
2017-18ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24,42,000 ಕೋಟಿ. ಆಗ ರಾಜ್ಯಕ್ಕೆ ಹಂಚಿಕೆಯಾದ ತೆರಿಗೆ 35,895 ಕೋಟಿ. ಕೇಂದ್ರ ನೀಡಿದ್ದ ಅನುದಾನ 16,082 ಕೋಟಿ. ಒಟ್ಟು 51,977 ಕೋಟಿ ಬಂದಿತ್ತು.
2019-20ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 27,86,349 ಕೋಟಿ. ಆಗ ರಾಜ್ಯಕ್ಕೆ ಹಂಚಿಕೆಯಾದ ತೆರಿಗೆ 30,919 ಕೋಟಿ. ಕೇಂದ್ರ ನೀಡಿದ್ದ ಅನುದಾನ 19,839 ಕೋಟಿ. ಒಟ್ಟು 50,758 ಕೋಟಿ.ಈ ವರ್ಷದ ಕೇಂದ್ರದ ಬಜೆಟ್ ಗಾತ್ರ 45,03,097 ಕೋಟಿ. ನಮಗೆ ಬರುವ ತೆರಿಗೆ ಪಾಲು 37,252 ಕೋಟಿ.ಕೇಂದ್ರದಿಂದ ಬರುವ ಅನುದಾನ 13,005 ಕೋಟಿ. ಒಟ್ಟು 50,257 ಕೋಟಿ. ಕೇಂದ್ರದ ಬಜೆಟ್ ಸುಮಾರು 20 ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಾಗಿದೆ ಆದರೆ ರಾಜ್ಯಕ್ಕೆ ಬರುವ ಅನುದಾನ ಕಡಿಮೆ ಆಗಿದೆ ಎಂದು ಅವರು ತಿಳಿಸಿದರು.
ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗಿರುವುದೇ ಹೆಚ್ಚು. ಇದರಿಂದಾಗಿ ಸಾಲವೂ ಹೆಚ್ಚಾಗಿದೆ. ಕನಿಷ್ಠ 1,04,000 ಕೋಟಿ ರಾಜ್ಯಕ್ಕೆ ಬರಬೇಕಿತ್ತು. 50,000 ಕೋಟಿ ಅಷ್ಟೆ ಬರುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


