ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಕರ್ನಾಟಕ –ಮಹಾರಾಷ್ಟ್ರ ನಡುವೆ ಉದ್ಭವಿಸಿರುವ ಗಡಿ ವಿವಾದವನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಗಡಿ ವಿವಾದವನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿ ಪಕ್ಷದ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದು ಟೀಕಿಸಿದ್ದಾರೆ.
ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


