ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಕೊಲೆಯಾದ ಹಿಂದೂಪರ ಸಂಘಟನೆ ಯುವಕನ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಕಲ್ಲು ತೂರಾಟ, ಹಿಂಸಾಚಾರ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ನಿನ್ನೆರಾತ್ರಿ ಕೊಲೆಯಾದ ಹಿಂದೂಪರ ಸಂಘಟನೆಯ ಹರ್ಷ ಅವರ ಮೃತದೇಹದ ಮೆರವಣಿಗೆ ಮೆಗ್ಗಾನ್ ಆಸ್ಪತ್ರೆಯಿಂದ ಬಸವನ ಬೀದಿಯ ಹರ್ಷ ನಿವಾಸದವರೆಗೆ ನಡೆಯುತ್ತಿತ್ತು.
ಈ ಸಂದರ್ಭದಲ್ಲಿ ಒಂದು ಗುಂಪಿನಿಂದ ಕಲ್ಲು ತೂರಾಟ ನಡೆದಿದೆ. ರವಿವರ್ಮ ಬೀದಿ, ಸಿದ್ದಯ್ಯ ರಸ್ತೆ ಮುಂತಾದ ಕಡೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ ಪರಿಣಾಮ ಇಬ್ಬರು ಗಾಯಗೊಂಡಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.ಉದ್ರಿಕ್ತರು ಅಂಗಡಿ-ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಪ್ರಯೋಗಿಸಿದರು. ನಂತರ ಗಾಳಿಯಲ್ಲಿ ಗುಂಡು ಹಾರಿಸಿದರು. ಮೆರವಣಿಗೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ರಾಘವೇಂದ್ರ ಭಾಗವಹಿಸಿದ್ದು, ಹರ್ಷ ಅವರ ಅಂತ್ಯ ಸಂಸ್ಕಾರ ಬಿಎಸ್ ರಸ್ತೆಯ ರೋಟರಿ ಚಿತಾಗಾರದಲ್ಲಿ ನಡೆಯಲಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy