ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸುವವರಿಗೆ ಶೇ. 50 ವಿನಾಯಿತಿ ಘೋಷಣೆ ಮಾಡಿದ ಬೆನ್ನಲ್ಲೇ ವಾಹನ ಸವಾರರು ದಂಡ ಪಾವತಿಸಲು ಮುಗಿಬಿದ್ದಿದ್ದಾರೆ. 8ನೇ ದಿನವೂ ಸಹ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಹಣ ಹರಿದು ಬಂದಿದೆ.
67, 0602 ಪ್ರಕರಣಗಳಲ್ಲಿ 17.61 ಕೋಟಿ ರೂಪಾಯಿ ದಂಡದ ಹಣ ಸಂಗ್ರಹವಾಗಿದೆ. ಇದರೊಂದಿಗೆ 31.11 ಲಕ್ಷ ಪ್ರಕರಣಗಳಲ್ಲಿ 85.83 ಕೋಟಿ ರೂಪಾಯಿ ಹಣ ಕಲೆಕ್ಷನ್ ಆಗಿದೆ. 50% ರಿಯಾಯಿತಿಯಲ್ಲಿ ದಂಡ ಪಾವತಿಗೆ ಫೆಬ್ರವರಿ 11 ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಸಂಚಾರ ನಿಮಯ ಉಲ್ಲಂಘಿಸಿದ ವಾಹನ ಸವಾರರು ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ದಂಡ ಪಾವತಿ ಮಾಡುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


