ಬೆಳಗಾವಿ: ಬೆಳ್ಳಂಬೆಳಗ್ಗೆ ಬೆಳಗಾವಿ ಚುನಾವಣಾ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಎರಡು ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಹಿರೇಬಾಗೇವಾಡಿ ಟೋಲ್ ಬಳಿ ಖಾಸಗಿ ಬಸ್‌ನಲ್ಲಿ ಸಾಗಿಸುತ್ತಿದ್ದ ಕಂತೆ ಕಂತೆ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮುಂಬೈನಿಂದ ಮಂಗಳೂರು ಕಡೆಗೆ ಹೊರಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಪಾಸಣೆ ನಡೆಸುವ ಸಂದರ್ಭದಲ್ಲಿ ಹಣದ ಬ್ಯಾಗ್ ಪತ್ತೆಯಾಗಿದೆ.
ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಆದಾಯ ತೆರಿಗೆ ಅಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


