ಬೀದರ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ.
ಮಹಾರಾಷ್ಟ್ರ ಹಾಗೂ ಬೀದರ್ ಗಡಿ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ವೇಳೆ 142 ಕೆ.ಜಿ ಬೆಳ್ಳಿಯ ಕಾಲು ಚೈನುಗಳು ಸೇರಿ 1 ಕೋಟಿ 5 ಲಕ್ಷ ಬೆಲೆ ಬಾಳುವ ಬೆಳ್ಳಿಯ ಆಭರಣಗಳ ಜೊತೆಗೆ ಕಾರು ಕೂಡ ಜಪ್ತಿ ಮಾಡಲಾಗಿದೆ.
ಒಟ್ಟು 8 ಬ್ಯಾಗ್ ಗಳಲ್ಲಿ 142 ಕೆಜಿ ಬೆಳ್ಳಿಯ ಆಭರಣಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಗಜಾನನ ಎಂಬವರಿಗೆ ಸೇರಿದ ಕಾರಿನಲ್ಲಿ ಅಪಾರ ಪ್ರಮಾಣದ ಬೆಳ್ಳಿಯ ಕಾಲು ಚೈನುಗಳು ಪತ್ತೆಯಾಗಿವೆ.
ಕಾರಿನ ಮಾಲೀಕರು ನಿಖರವಾದ ದಾಖಲೆಗಳು ನೀಡದ ಹಿನ್ನೆಲೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ತಂದಿರುವ ಶಂಕೆ ವ್ಯಕ್ತವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


