nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ

    July 30, 2026
    Facebook Twitter Instagram
    ಟ್ರೆಂಡಿಂಗ್
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    • ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ
    • ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಾಖಲೆ ಕಳ್ಳರ ರಕ್ಷಣೆಗೆ ನಿಂತ ಎಸಿ, ತಹಸೀಲ್ದಾರ್: ಸುಧೀರ್ ಮುರೊಳ್ಳಿ ಗಂಭೀರ ಆರೋಪ
    ಜಿಲ್ಲಾ ಸುದ್ದಿ February 4, 2022

    ದಾಖಲೆ ಕಳ್ಳರ ರಕ್ಷಣೆಗೆ ನಿಂತ ಎಸಿ, ತಹಸೀಲ್ದಾರ್: ಸುಧೀರ್ ಮುರೊಳ್ಳಿ ಗಂಭೀರ ಆರೋಪ

    By adminFebruary 4, 2022No Comments2 Mins Read
    maroli

    ಕೊಪ್ಪ: ತಾಲ್ಲೂಕು ಕಚೇರಿಯ ಕಡತಗಳನ್ನು ಬಚ್ಚಿಟ್ಟುಕೊಂಡು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿರುವ ಪ್ರಥಮ ದರ್ಜೆ ಸಹಾಯಕ ಪ್ರಕಾಶ್ ಎಂಬುವವರನ್ನು ಕೊಪ್ಪ ತಹಸೀಲ್ದಾರ್ ಪರಮೇಶ್ ಹಾಗೂ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಡಾ.ಎಚ್.ಎನ್.ನಾಗರಾಜ್ ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಭಾರೀ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದೆ.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೊಳ್ಳಿ , ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಇನೇಶ್, ನುಗ್ಗಿ ಮಂಜುನಾಥ್ ಸೇರಿದಂತೆ ಹಲವು ಮುಖಂಡರು ಈ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಕೊಪ್ಪ ತಹಸೀಲ್ದಾರ್ ಕಚೇರಿಯಲ್ಲಿ ಈ ಹಿಂದೆ ರೈತರು ಹಾಗೂ ಬಡವರ ಫಾರಂ-50, 53 ಕಡತಗಳ ಉಸ್ತುವಾಗಿಯಾಗಿದ್ದ ಪ್ರಥಮ ದರ್ಜೆ ಸಹಾಯಕ ಪ್ರಕಾಶ್ ಸುಮಾರು 300ಕ್ಕಿಂತ ಹೆಚ್ಚು ಕಡತಗಳನ್ನು ದುರುದ್ದೇಶದಿಂದ ಬಚ್ಚಿಟ್ಟುಕೊಂಡು ಹಣ ಕೊಟ್ಟವರ ಕಡತಗಳನ್ನಷ್ಟೇ ಭೂ ಮಂಜೂರಾತಿ ಪ್ರಕ್ರಿಯೆ ಪ್ರಸ್ತಾವನೆಗೆ ಸಲ್ಲಿಸುತ್ತಿದ್ದ.ಈತನ ವರ್ಗಾವಣೆ ಸಂದರ್ಭದಲ್ಲೂ ಕಡತಗಳನ್ನು ಹಸ್ತಾಂತರಿಸದೆ ಗಂಭೀರ ಕರ್ತವ್ಯಲೋಪವೆಸಗಿರುವುದಲ್ಲದೆ ಪ್ರಭಾರ ವಹಿಸಿಕೊಡುವ ಪ್ರಕ್ರಿಯೆಯಲ್ಲೂ ಲೋಪವೆಸಗಿದ್ದಾನೆ. ಕೊಪ್ಪಕ್ಕೆ ಕರ್ತವ್ಯಕ್ಕೆ ಬರುವ ಮುನ್ನವೇ ಈತ ಅಮಾನತುಗೊಂಡಿದ್ದ.ಕಳೆದ ಸಾಲಿನ ಮಾರ್ಚ್‍ನಲ್ಲಿ ಶಾಸಕರ ನೇತೃತ್ವದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈತನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಂದಾಯ ಇಲಾಖೆಗೆ ಸೂಚಿಸಲಾಗಿತ್ತು.ಈತನನ್ನು ಶೃಂಗೇರಿ ತಾಲ್ಲೂಕು ಕಚೇರಿಗೆ ವರ್ಗಾಯಿಸಿದ್ದು, ಶೃಂಗೇರಿ ತಾಲ್ಲೂಕು ಕಚೇರಿಯ ಕಡತ ನಾಶ ಹಾಗೂ ಇತರ ಅವ್ಯವಹಾರಗಳಲ್ಲಿ ಭಾಗಿಯಾಗಿರುವ ಶಂಕೆ ಇದೆ. ಇತ್ತೀಚೆಗೆ ಶೃಂಗೇರಿಯಿಂದ ಚಿಕ್ಕಮಗಳೂರು ಕಂದಾಯ ಇಲಾಖೆಯ ಕೇಂದ್ರ ಸ್ಥಾನಕ್ಕೆ ವರ್ಗಾಯಿಸಿದ್ದು, ಅಲ್ಲಿಯೂ ಕೂಡ ಇವರ ಆಟಾಟೋಪ ಮುಂದುವರೆದಿದೆ.

    ಇಷ್ಟೆಲ್ಲ ಗಂಭೀರ ಆರೋಪಗಳಿದ್ದರೂ ತಹಸೀಲ್ದಾರರಾಗಲಿ, ಉಪವಿಭಾಗಾಧಿಕಾರಿಗಳಾಗಲಿ ಈತನ ಮೇಲೆ ಯಾವುದೇ ರೀತಿಯ ಕ್ರಮ ಜರುಗಿಸದೆ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ತಕ್ಷಣವೇ ಪ್ರಕಾಶ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.ಕಡತಗಳಿಲ್ಲದೆ ರೈತರು ಮತ್ತು ಕೃಷಿಕರಿಗೆ ಅರ್ಜಿ ರಿಜಿಸ್ಟರ್ ಆಧಾರದಲ್ಲಿ ಕಡತ ತಯಾರಿಸಲು ಸೂಕ್ತ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಈ ಬಗ್ಗೆ ಜನಜಾಗೃತಿ ಹೋರಾಟ ರೂಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಶೃಂಗೇರಿ ಕ್ಷೇತ್ರದ ಕಾರ್ಯಾಧ್ಯಕ್ಷನವೀನ್ ಕರುವಾನೆ, ಕೊಪ್ಪ ಪಟ್ಟಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಜಯ್‍ಕುಮಾರ್, ಕೊಪ್ಪ ಪಟ್ಟಣ ಪಂಚಾಯಿತಿ ಸದಸ್ಯ ರಶೀದ್ ಸೇರಿದಂತೆ ಹಲವು ಮುಖಂಡರು ಒತ್ತಾಯಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ

    July 30, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು

    July 30, 2026

    ತುಮಕೂರು/ಮಧುಗಿರಿ: ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮಹತ್ವದ ಹೆಜ್ಜೆಯಾಗಿ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯ ಸಮೀಪವಿರುವ ಮೊರಾರ್ಜಿ ವಸತಿ ಶಾಲೆಗೆ…

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ

    July 30, 2026

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.