ತುಮಕೂರು: ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೊಪ್ಪು, ತರಕಾರಿ ಕಟಾವು ಸಾಧ್ಯವಾಗದ ಹಿನ್ನೆಲೆಯಲ್ಲಿ ತರಕಾರಿ ಬೆಲೆ ಗಗನಕ್ಕೆ ಏರಿದ್ದು, ತರಕಾರಿ ಬೆಲೆ ಎರಡು ಮೂರು ಪಟ್ಟು ಏರಿಕೆಯಾಗಿದೆ.
ಕೋಲಾರ ಜಿಲ್ಲೆಯಲ್ಲಿ ಟೊಮೆಟೋ ಬೆಲೆ ಸಂಪೂರ್ಣವಾಗಿ ನಾಶವಾಗಿರುವ ಹಿನ್ನೆಲೆಯಲ್ಲಿ ಟೊಮೆಟೋ ಬೆಲೆ ಗಗನಕ್ಕೇರಿದ್ದು, ಜಿಲ್ಲೆಗಳಲ್ಲಿ ಸಾರ್ವಕಾಲಿಕ ದಾಖಲೆಗಳನ್ನು ಮುರಿದು ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಮೇಲಕ್ಕೆ ಜಿಗಿಯುತ್ತಲೇ ಇದೆ.
ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚು ಸುಮಾರು 9 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಟೊಮೆಟೊ ಬೆಳೆಯಲಾಗುತ್ತದೆ. ತಿಂಗಳ ಹಿಂದೆ ಕೋಲಾರ ಎಪಿಎಂಸಿಯಲ್ಲಿ 16,394 ಕ್ವಿಂಟಾಲ್ ಇದ್ದ ಟೊಮೆಟೊ ಆವಕ ಶನಿವಾರ 4,133 ಕ್ವಿಂಟಾಲ್ಗೆ ಇಳಿಕೆಯಾಗಿದೆ.
ಟೊಮೆಟೊ ಆವಕ ಕುಸಿದಿರುವ ಕಾರಣಕ್ಕೆ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ತಿಂಗಳ ಹಿಂದೆ ಸ್ಥಳೀಯ ಮಾರುಕಟ್ಟೆಯಲ್ಲಿ ಟೊಮೆಟೊ ಸಗಟು ಬೆಲೆ ಕ್ವಿಂಟಾಲ್ಗೆ ಕನಿಷ್ಠ ರೂ. 330 ಮತ್ತು ಗರಿಷ್ಠ ರೂ. 3,330 ಇತ್ತು. ಶನಿವಾರ ಟೊಮೆಟೊ ಬೆಲೆ ಕನಿಷ್ಠ ರೂ. 2,000 ಹಾಗೂ ಗರಿಷ್ಠ ರೂ. 6,660ಕ್ಕೆ ಜಿಗಿದಿದೆ. ಸಗಟು ದರಕ್ಕೆ ಅನುಗುಣವಾಗಿ ಚಿಲ್ಲರೆ ಮಾರಾಟ ದರವೂ ಏರಿಕೆಯಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700