nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ

    October 17, 2026

    ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು

    October 17, 2026

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    • ಮಹಿಳೆಯರಲ್ಲೇ ಥೈರಾಯ್ಡ್ ಸಮಸ್ಯೆ ಹೆಚ್ಚು ಏಕೆ? ಈ 3 ಅಂಶಗಳ ಬಗ್ಗೆ ತಿಳಿಯಿರಿ
    • ‘ಗ್ರಂಥ’ ಚಿತ್ರಕ್ಕೆ ಮುಹೂರ್ತ, ಭೂಗತಲೋಕದ ಕುರಿತಾದ 90ರ ಕಾಲಘಟ್ಟದ ಚಿತ್ರ
    • ಸಂಪಾದಕೀಯ: ತೆರಿಗೆ ಹೊರೆಗಿಂತ ಅರಿವಿನ ಕೊರತೆಯೇ ಹೆಚ್ಚು ಅಪಾಯಕಾರಿ
    • ನವರಾತ್ರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇತಿಹಾಸದಲ್ಲೇ ಮೊದಲ ಬಾರಿಗೆ 4 ಡಿಜಿಟ್ ತಲುಪಿದ ರೇಷ್ಮೆ ಗೂಡಿನ ಬೆಲೆ..!
    ರಾಜ್ಯ ಸುದ್ದಿ February 3, 2022

    ಇತಿಹಾಸದಲ್ಲೇ ಮೊದಲ ಬಾರಿಗೆ 4 ಡಿಜಿಟ್ ತಲುಪಿದ ರೇಷ್ಮೆ ಗೂಡಿನ ಬೆಲೆ..!

    By adminFebruary 3, 2022No Comments2 Mins Read
    reshme

    ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ನಾಲ್ಕು ಡಿಜಿಟ್‌ ಗೆ ತಲುಪಿರುವುದಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

    ದಿನದಿಂದ ದಿನಕ್ಕೆ ರೇಷ್ಮೆಗೂಡಿನ ದರ ಏರಿಕೆಯಾಗುತ್ತಲ್ಲಿದ್ದು, ಒಂದು ಕೆಜಿ ರೇಷ್ಮೆಗೂಡಿನ ಒಂದು ಸಾವಿರ ರೂಪಾಯಿ ಗಡಿದಾಟಿದೆ. ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಇಂದು ದಾಖಲೆ ಮಟ್ಟದಲ್ಲಿ ರೇಷ್ಮೆ ಗೂಡ ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ‌ 1043 ರೂಪಾಯಿಗೆ ಮಾರಾಟವಾಗಿದೆ.

    ರೇಷ್ಮೆ ಮಾರುಕಟ್ಟೆಗಳಲ್ಲಿ ರೇಷ್ಮೆ ಗೂಡಿಗೆ ಹೆಚ್ಚಿನ ದರ ಸಿಗದಂತೆ ನಿಯಂತ್ರಿಸುತ್ತಿದ್ದ ದಲ್ಲಾಳಿಗಳಿಗೆ ಕಡಿವಾಣ, ಮಾರುಕಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ, ರೇಷ್ಮೆ ಬೆಳೆಗಾರರಿಗೆ ಆಗುತ್ತಿದ್ದ ಕಿರುಕುಳಕ್ಕೆ ಬ್ರೇಕ್, ರೇಷ್ಮೆಗೂಡು ಕದಿಯುತ್ತಿದ್ದವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ, ಇ- ಪೆಮೆಂಟ್ ವ್ಯವಸ್ಥೆ ಜಾರಿ ಸೇರಿದಂತೆ ಸಚಿವ ಡಾ.ನಾರಾಯಣಗೌಡ ಅವರು ತೆಗೆದುಕೊಂಡ ಹಲವು ದಿಟ್ಟ ಕ್ರಮಗಳ ಪರಿಣಾಮವಾಗಿ ಇಂದು ದಾಖಲೆ ದರಕ್ಕೆ ರೇಷ್ಮೆ ಗೂಡು ಮಾರಾಟವಾಗುವ ಮೂಲಕ ರೈತರಿಗೆ ನೈಜ ಬೆಲೆ ಸಿಗಲು ಕಾರಣವಾಗಿದೆ.ರೇಷ್ಮೆ ದರ ಸರಾಸರಿ ಕಳೆದ ವರ್ಷಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ. 2020-21 ನೇ ಸಾಲಿನಲ್ಲಿ ಪ್ರತಿ ಕೆಜಿ ರೇಷ್ಮೆ ಗೂಡಿಗೆ ಸರಾಸರಿ 300 ರೂಪಾಯಿ ಇತ್ತು. 2021 ಸಾಲಿನ ನವೆಂಬರ್- ಡಿಸೆಂಬರ್ ತಿಂಗಳಿನಲ್ಲಿ 700-800 ರೂ.ನಷ್ಟಿತ್ತು. ಆದರೆ ಇವತ್ತು 1043 ರೂ.ಗೆ ಮಾರಾಟವಾಗುವ ಮೂಲಕ ದಾಖಲೆ ಸೃಷ್ಟಿಸಿದೆ.

    ರೈತನ ಮಗನಾಗಿ, ರೇಷ್ಮೆ ಬೆಳೆಗಾರನಾಗಿದ್ದ ನನಗೆ ಸಾರ್ಥಕ ಕ್ಷಣ: ಸಚಿವ ಡಾ.ನಾರಾಯಣಗೌಡ 

    ಪ್ರತಿ ಕೆಜಿ ಗೂಡಿಗೆ ಸಾವಿರದ ರೂಪಾಯಿ ಗಡಿ ದಾಟಿರುವುದು ರೇಷ್ಮೆ ಬೆಳೆಗಾರರಿಗೆ ಸಂತೋಷವನ್ನು ತಂದಿದೆ. ಇಂದು ರಾಮನಗರ ಮಾರುಕಟ್ಟೆಯಲ್ಲಿ ಒಂದು ಕೆಜಿ ರೇಷ್ಮೆ ಗೂಡು 1043 ರೂ.ಗೆ ಮಾರಾಟವಾಗಿದೆ. ಇದು ರೇಷ್ಮೆ ಬೆಳೆಗಾರರಲ್ಲಿ ಮತ್ತಷ್ಟು ಹುಮ್ಮಸ್ಸು ತರಿಸಿದ್ದು, ಉತ್ತಮ ಗುಣಮಟ್ಟದ ರೇಷ್ಮೆ ಗೂಡು ಬೆಳೆಯಲು ಇದು ಸಹಕಾರಿಯಾಗಲಿದೆ.ರೇಷ್ಮೆ ಮಾರುಕಟ್ಟೆಗಳಲ್ಲಿ ಆಗುತ್ತಿದ್ದ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿರುವ ಪರಿಣಾಮದಿಂದ ರೇಷ್ಮೆ ಗೂಡಿನ ಗುಣಮಟ್ಟಕ್ಕೆ ತಕ್ಕಂತೆ ನೈಜ ಬೆಲೆ ಸಿಗುತ್ತಿದೆ. ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡ ಪರಿಣಾಮದಿಂದ ರೇಷ್ಮೆ ಗೂಡಿನ ದರವೂ ಭಾರಿ ಪ್ರಮಾಣದಲ್ಲಿ ಹೆಚ್ಚಾಗುವ ನಿರೀಕ್ಷೆಯಿತ್ತು, ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

    ರೇಷ್ಮೆ ಬೆಳೆಗಾರರ ಜೊತೆ ನಮ್ಮ ಸರ್ಕಾರ ಇದೆ. ರೇಷ್ಮೆ ಬೆಳೆಗಾರರಿಗೆ ಯಾವುದೇ ರೀತಿ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಹಾಗೂ ಗುಣಮಟಕ್ಕೆ ತಕ್ಕಂತೆ ಉತ್ತಮ ಬೆಲೆ ಸಿಗುವಂತೆ ನೋಡಿಕೊಳ್ಳುತ್ತೇನೆ. ರೇಷ್ಮೆ ಗೂಡು ದರ ನಾಲ್ಕು ಡಿಜಿಟ್‌ಗೆ ತಲುಪಿರುವುದು ಮತ್ತಷ್ಟು ರೈತರು ರೇಷ್ಮೆ ಬೆಳೆಯುವುದಕ್ಕೆ ಪ್ರೇರಣೆಯಾಗಲಿದೆ ಎಂದು ಸಚಿವ ಡಾ.ನಾರಾಯಣ ಗೌಡ ಅವರು ತಿಳಿಸಿದ್ದಾರೆ.

    ಬಿಡ್ಡಿಂಗ್ ತಂತ್ರಾಂಶ ನವೀಕರಣ:

    ಕಷ್ಟಪಟ್ಟು ರೇಷ್ಮೆ ಬೆಳೆಯುವ ರೈತರಿಗೆ ನೈಜ ಬೆಲೆ ಸಿಗಬೇಕು ಎಂಬುವುದು ಸಚಿವ ಡಾ.ನಾರಾಯಣ ಗೌಡ ಅವರ ಕನಸಾಗಿತ್ತು. ಆ ನಿಟ್ಟಿನಲ್ಲಿ ರೇಷ್ಮೆ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ ಇಲಾಖೆಯಲ್ಲಿ ಹಲವು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದರು.

    ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ತೆಗೆದುಕೊಂಡ ಪರಿಣಾಮವಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ನಾಲ್ಕು ಡಿಜಿಟ್‌ಗೆ ತಲುಪುವ ನಿರೀಕ್ಷೆ ಇಲಾಖೆಗೆ ಇತ್ತು. ಹಾಗಾಗಿ, ಕೇವಲ ಮೂರು ಡಿಜಿಟ್ ಹೊಂದಿದ್ದ ಬಿಡ್ಡಿಂಗ್ ತಂತ್ರಾಂಶವನ್ನು ಅಪ್ಡೇಟ್ ಮಾಡಲಾಗಿತ್ತು. ತಂತ್ರಾಂಶ ನವೀಕರಿಸಿರುವುದರಿಂದ ನಾಲ್ಕು ಡಿಜಿಟ್‌ನಲ್ಲಿ ಬಿಡ್ಡಿಂಗ್ ಮಾಡಲು ಸಹಕಾರಿಯಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    Leave A Reply Cancel Reply

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ

    October 17, 2026

    ತುಮಕೂರು: ನಗರದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ವೃತ್ತವನ್ನು ತುಮಕೂರು ಸ್ಕ್ವೇರ್ ಆಗಿ ಅಭಿವೃದ್ಧಿ ಪಡಿಸಲು ಮುಂದಾಗಿರುವ ಜಿಲ್ಲಾಡಳಿತದ ಕ್ರಮಕ್ಕೆ…

    ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು

    October 17, 2026

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.