ಬಹುಭಾಷಾ ನಟ ಧನಂಜಯ್ ಅವರ 26ನೇ ಸಿನಿಮಾ ಅನೌನ್ಸ್ ಆಗುತ್ತಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆ ಚಿತ್ರಕ್ಕೆ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಈ ಚಿತ್ರದಲ್ಲಿ ಧನಂಜಯ್ ಜೊತೆಗೆ ತೆಲುಗಿನ ಪ್ರತಿಭಾನ್ವಿತ ನಟ ಸತ್ಯದೇವ್ ಕೂಡ ಮುಖ್ಯಭೂಮಿಕೆಯಲ್ಲಿ ಬಣ್ಣ ಹಚ್ಚಿದ್ದಾರೆ. ವಿಶೇಷ ಅಂದರೆ ಇದು ಸತ್ಯದೇವ್ ನಟಿಸುತ್ತಿರುವ 26ನೇ ಕೂಡ ಹೌದು..
ತೆಲುಗಿನಲ್ಲಿ ಪೆಂಗ್ವಿನ್ ಸಿನಿಮಾ ಮಾಡಿದ್ದ ಈಶ್ವರ್ ಕಾರ್ತಿಕ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಚರಣ್ ರಾಜ್ ಸಂಗೀತ ನೀಡಲಿದ್ದಾರೆ.
ಅಂದಹಾಗೆ ಕ್ರೈಮ್ ಕಥೆಯನ್ನೊಳಗೊಂಡ ಈ ಚಿತ್ರವನ್ನು ಓಲ್ಡ್ ಟೌನ್ ಪಿಕ್ಚರ್ಸ್ ಸಂಸ್ಥೆಯಡಿ ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy