ತುಮಕೂರು ಜಿಲ್ಲೆಯ ದುಂಡ ಗ್ರಾಮದಲ್ಲಿ ದಶಕದ ಹಿಂದೆ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದ ಹೈಕೋರ್ಟ್, ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡ (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 3 ಸಾವಿರ ರೂ. ಗಳ ದಂಡ ವಿಧಿಸಿದೆ.
ಜತೆಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮಾಡಲಾದ ಆರೋಪಗಳಿಗೆ ವಿವಿಧ ಹಂತದ ಶಿಕ್ಷೆ ವಿಧಿಸಿ ಒಟ್ಟು 85 ಸಾವಿರ ರೂ. ಗಳ ದಂಡ ವಿಧಿಸಿ ಆದೇಶಿಸಿದೆ.


