ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪೂರ್ ಪೊಲೀಸ್ ಠಾಣೆಯ ವತಿಯಿಂದ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ-– ಪರಿಶಿಷ್ಟ ಪಂಗಡದ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸದಂತೆ ಎಚ್ಚರ ವಹಿಸಲಾಗುವುದು.
ಪ್ರತಿ ಭಾನುವಾರ ‘ದಲಿತ ದಿನಾಚರಣೆ’ ನಡೆಸುವ ಮೂಲಕ ದಲಿತರ ಅಹವಾಲುಗಳನ್ನು ಆಲಿಸಲಾಗುವುದು’ ಎಂದು ಪೊಲೀಸ್ ಆಯುಕ್ತ ಎ.ಎಸ್.ಐ. ಅಬ್ದುಲ್ ಶುಕೂರ್ ತಿಳಿಸಿದರು.
ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿಗಳಾದ ಶೇರಣಾಪ್ಪಾ ಜಮಾದಾರ್, ವೆಂಕಟ್ ಪೊಲೀಸ್ ಇದ್ದರು. ಇದೇ ಸಂದರ್ಭದಲ್ಲಿ ಔರಾದ ತಾಲೂಕಿನ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಅಧ್ಯಕ್ಷರಾದ ನಾಗನಾಥ್ ಬಂಗಾರೇ, ವಾಧನ, ಗೌತಮ್ ಮೇತ್ರೆ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4