nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    • ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    ಜಿಲ್ಲಾ ಸುದ್ದಿ June 29, 2026

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    By adminJune 29, 2026No Comments2 Mins Read

    ಸರಗೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಮಿತಿಯ ವತಿಯಿಂದ ಜುಲೈ 3ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ (ಫ್ರೀಡಂ ಪಾರ್ಕ್) ಹಮ್ಮಿಕೊಳ್ಳಲಾಗಿರುವ ‘ದಲಿತ ಜನಾಗ್ರಹ ಸಮಾವೇಶ’ದ ಪೋಸ್ಟರ್ ಅನ್ನು ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು. ಆದಿಕರ್ನಾಟಕ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಜಂಟಿಯಾಗಿ ಪೋಸ್ಟರ್ ಬಿಡುಗಡೆ ಮಾಡಿ, ಸಮಾವೇಶದ ಸಿದ್ಧತೆಗಳಿಗೆ ಅಧಿಕೃತ ಚಾಲನೆ ನೀಡಿದರು.

    ಈ ಸಮಾವೇಶಕ್ಕೆ ಎಚ್‌.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನಿಂದ ಇನ್ನೂರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

    ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷರಾದ ಸರಗೂರು ಶಿವಣ್ಣ, “ದಲಿತ ಸಮುದಾಯಕ್ಕೆ ಸಿಗಬೇಕಾಗಿರುವ ಸರ್ಕಾರಿ ಅಗತ್ಯ ಸೌಲಭ್ಯಗಳಾದ ಭೂಮಿ, ವಸತಿ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜುಲೈ 3ರಂದು ಬೆಂಗಳೂರಿನಲ್ಲಿ ಈ ಬೃಹತ್ ಜನಾಗ್ರಹ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ,” ಎಂದು ವಿವರಿಸಿದರು.

    ದಸಂಸ (ಅಂಬೇಡ್ಕರ್ ವಾದ) ಸಮಿತಿಯ ತಾಲ್ಲೂಕು ಸಂಚಾಲಕರಾದ ಕೂಡಗಿ ಗೋವಿಂದರಾಜು ಮಾತನಾಡಿ, “ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಅನುದಾನವನ್ನು ನಿಯಮಬಾಹಿರವಾಗಿ ಬಳಕೆ ಮಾಡಲಾಗುತ್ತಿದೆ. ಇದರೊಂದಿಗೆ ಉದ್ಯೋಗ ನೇಮಕಾತಿ ಹಾಗೂ ವಿಶೇಷ ಘಟಕ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಈ ಸಮಾವೇಶದ ಮೂಲಕ ಸರ್ಕಾರದ ಗಮನ ಸೆಳೆಯಲಾಗುತ್ತಿದೆ. ಆದ್ದರಿಂದ ತಾಲ್ಲೂಕಿನ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸಬೇಕು,” ಎಂದು ಕರೆ ನೀಡಿದರು.

    ಈ ಸಂದರ್ಭದಲ್ಲಿ ದಸಂಸ (ಅಂಬೇಡ್ಕರ್ ವಾದ) ಸಂಘಟನೆಯ ಸಂಚಾಲಕರಾದ ಹಾದನೂರು ಚಂದ್ರ, ಕುರ್ಣೇಗಾಲ ಕೃಷ್ಣ, ಚಂಗೌಡನಹುಂಡಿ ಶಿವರಾಜು, ಕೂಲ್ಯ ಮಹದೇವಸ್ವಾಮಿ ಹಾಗೂ ಮುಖಂಡರಾದ ಜಿ. ಗೋಪಾಲಸ್ವಾಮಿ, ಚನ್ನೀಪುರ ಮಲ್ಲೇಶ್, ಎಸ್.ಡಿ. ಸಣ್ಣಸ್ವಾಮಿ, ಮುಳ್ಳೂರು ಮಂಜು, ಹುನಗಹಳ್ಳಿ ಗೋವಿಂದ, ಅಣ್ಣಯ್ಯಸ್ವಾಮಿ, ರಾಜೇಶ್, ರವಿಕುಮಾರ್, ಪುಟ್ಟು ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ತುಮಕೂರು: ಸಾಹಿತಿ ಡಾ.ಸುಚೇತನಾ ಸ್ವರೂಪ ಅವರು ರಚಿಸುವ ಕಾದಂಬರಿ ಕಾಡುದೇವರಬೆಟ್ಟ ವಿವಿಧ ಆಯಾಮ, ಪಾತ್ರಗಳ ಮೂಲಕ ಬದುಕಿನ ತಾತ್ವಿಕ ಶೋಧವನ್ನು…

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026

    ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.