ಬಿಹಾರ: ದಲಿತ ಮಹಿಳೆ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವ ಘಟನೆ ಪಾಟ್ನಾದಲ್ಲಿ ನಡೆದಿದ್ದು, ನಡ ರಸ್ತೆಯಲ್ಲೇ ಮಹಿಳೆಗೆ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ರಾಜ್ ಕಿಶೋರ್ ಸಿಂಗ್ ಎಂಬಾತ ಮಹಿಳೆಗೆ ಹಲ್ಲೆ ನಡೆಸಿದ್ದು, ಈ ಹಲ್ಲೆಯ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
ಕಿಡ್ನ್ಯಾಪ್ ಪ್ರಕರಣ ಸಂಬಂಧ 2 ಕುಟುಂಬಗಳ ನಡುವೆ ಗಲಾಟೆಯಾಗಿದೆ.. ಇಬ್ಬರು ಮಹಿಳೆಯರು ನಡುರಸ್ತೆಯಲ್ಲಿ ಕಿತ್ತಾಡಿಕೊಂಡಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.
ಲಾಠಿಯಿಂದ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ರಾಜ್ ಕಿಶೋರ್ ಸಿಂಗ್ ನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296