ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳು, ಮಹಿಳೆಯರು ಮತ್ತು ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ. ಅಯೋಧ್ಯೆ ಜಿಲ್ಲೆಯಲ್ಲಿ ಮೂವರು ದುಷ್ಕರ್ಮಿಗಳು ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.
ಬಿಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಮ್ಮ ಗ್ರಾಮದ ಬಳಿಯ ಶೆರ್ಪುರ್‌ಪುರ ಮಾರುಕಟ್ಟೆಯಿಂದ ಮನೆಗೆ ತೆರಳುತ್ತಿದ್ದಾಗ ಅವರನ್ನು ದುಷ್ಕರ್ಮಿಗಳು ಅಪಹರಿಸಿ ಸಮೀಪದ ಕಬ್ಬಿನ ಗದ್ದೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಅವರನ್ನು ಬಿಟ್ಟು ಪರಾರಿಯಾಗಿದ್ದಾರೆ. ಮನೆಗೆ ತೆರಳಿದ ಸಂತ್ರಸ್ತರು ಮರುದಿನ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ.
ಸಂತ್ರಸ್ತೆಯ ಕುಟುಂಬದ ಸದಸ್ಯರು ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರು ನೀಡಲು ಹೋದಾಗ ಸ್ಥಳೀಯ ಪೊಲೀಸರು ಎಫ್ ಐಆರ್ ದಾಖಲಿಸಲು ನಿರಾಕರಿಸಿದರು. ಈ ವಿಷಯ ಹೊರಬೀಳದಂತೆ ಎಚ್ಚರಿಕೆ ವಹಿಸಿದ್ದರು.
ಆದರೆ, ಹಿರಿಯ ಪೊಲೀಸ್ ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಕೊನೆಗೂ ಎಫ್‌ಐಆರ್ ದಾಖಲಾಗಿದೆ. ಭೈಲಾಲ್ ಯಾದವ್, ತ್ರಿಭುವನ್ ಯಾದವ್ ಮತ್ತು ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz