ತುಮಕೂರು: ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿ ಹರೀಶ್ ಜಿ. ಕಟ್ಟೆಮನೆ ಅವರನ್ನು ನೇಮಕ ಮಾಡಿ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಹೆಚ್.ಶಿವಕುಮಾರ್ ಅವರು ಆದೇಶಿಸಿದ್ದಾರೆ.
ಹರೀಶ್ ಜಿ. ಕಟ್ಟೆಮನೆ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ, ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗಿದ್ದು, ಸಂಘಟನೆಯನ್ನು ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ಬಲಪಡಿಸಲು ಸಂಪೂರ್ಣ ಅಧಿಕಾರವನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನೊಂದವರ ಧ್ವನಿಯಾಗಿ, ದಲಿತರ ಪರವಾದ ಹೋರಾಟದಲ್ಲಿ ಯಶಸ್ವಿಯಾಗಿ ಎಂದು ಹರೀಶ್ ಜಿ. ಕಟ್ಟೆಮನೆ ಅವರಿಗೆ ಹಾರೈಸಿರುವ ರಾಜ್ಯಾಧ್ಯಕ್ಷರು, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700