ದಲಿತ ಸಿಎಂ ಬಳಿಕ ಕಾಂಗ್ರೆಸ್ ನಲ್ಲೀಗ ಮಹಿಳಾ ಸಿಎಂ
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು ಎದ್ದಿತ್ತು. ಇದೀಗ ಈ ಬಳಿಕ ಮಹಿಳಾ ಮುಖ್ಯಮಂತ್ರಿ ಕೂಗು ಎದ್ದಿದೆ. ಈ ಬಗ್ಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿಷಯವನ್ನು ಎತ್ತಿದ್ದಾರೆ.
ಮಹಿಳಾ ಮುಖ್ಯಮಂತ್ರಿ ಬರಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಅದಕ್ಕೆ ತಕ್ಕ ವಾತಾವರಣ ನಿರ್ಮಾಣವಾಗಬೇಕಿದೆ. ನಾವು ಅರ್ಧದಷ್ಟು ಜನಸಂಖ್ಯೆ ಇದ್ದೇವೆ. ಯಾಕೆ ಕೊಡಬಾರದು ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಮಾತ್ರ ದಲಿತ ಸಿಎಂ ಸಾಧ್ಯ. ಬಿಜೆಪಿ ದಲಿತರನ್ನು ಒಡೆದು ಆಳುವ ನೀತಿ ಅನುರಸಿರುತ್ತಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವುದಕ್ಕೆ ಯೋಗ್ಯತೆ ಇರಲಿಲ್ಲ ಎಂದು ಕಿಡಿಕಾರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


