ತಿಪಟೂರು: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಜ.26ರಂದು ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವ ಚಿತ್ರಕ್ಕೆವನ್ನು ಕಾರ್ಯಕ್ರಮದ ವೇದಿಕೆಯಿಂದ ತೆಗೆಸಿ ಅವಮಾನ ಮಾಡಿರುವ ಘಟನೆಯನ್ನು ಖಂಡಿಸಿ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ರಾಯಚೂರು ಜಿಲ್ಲಾನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಭಾವಚಿತ್ರಕ್ಕೆ ಚಪ್ಪಲಿ ಹಾರಹಾಕಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು .
ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಬಿ.ಹೆಚ್.ರಸ್ತೆ ಮೂಲಕ ಸಾಗಿದ ಪ್ರತಿಭಟನಾಕಾರರು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿಮುಂದೆ ಧರಣಿ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರ ಹಾಗೂ ರಾಜ್ಯಪಾಲರಿಗೆ ಮನವಿ ಪತ್ರಸಲ್ಲಿಸಿದರು. ತಹಸೀಲ್ದಾರ್ ಚಂದ್ರಶೇಖರಯ್ಯ ಮನವಿಪತ್ರ ಸ್ವೀಕರಿಸಿದರು
ಪ್ರತಿಭಟನಾ ನಿರತರನ್ನ ಉದೇಶಿಸಿ ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಕುಪ್ಪಾಳು ರಂಗಸ್ವಾಮಿ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಮತ್ತು ಸಂವಿಧಾನಕ್ಕೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ವೃತ್ತಿ ಗೌರವಕ್ಕೆ ಅವಮಾನ ಮಾಡಿದ್ದಲ್ಲದೆ ಸಂವಿಧಾನಕ್ಕೆ ಮತ್ತು ಭಾರತ ರತ್ನ ಮಹಾನಾಯಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದು ಖಂಡನೀಯ ಎಂದರು.
ಜಾತಿ ಮನಸ್ಥಿತಿಯ ಮಲ್ಲಿಕಾರ್ಜನಗೌಡರಿಂದ ಸಾಮಾಜಿಕ ನ್ಯಾಯದೊರೆಯಲು ಸಾಧ್ಯವಿಲ್ಲ. ಕಾನೂನನ್ನು ಗೌರವಿಸದ ವ್ಯಕ್ತಿ ನ್ಯಾಯಾಧೀಶ ಹುದ್ದೆಗೆ ಅನರ್ಹವಾಗಿದ್ದೂ ಸರ್ಕಾರ ಹಾಗೂ ರಾಜ್ಯ ಹೈಕೋರ್ಟ್ ಮಲ್ಲಿಕಾರ್ಜುನಗೌಡರ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಕೂಡಲೇ ನ್ಯಾಯಾಧೀಶ ಸ್ಥಾನದಿಂದ ವಜಾಗೊಳಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಎಪಿಎಂಸಿ ನಿರ್ದೇಶಕ ಬಜಗೂರುಮಂಜುನಾಥ್ ಮಾತನಾಡಿ, ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರಿಗೆ ಅಪಮಾನ ಮಾಡಿರುವುದು ಅಕ್ಷಮ್ಯ ಅಪರಾದವಾಗಿದೆ ಈ ಕೃತ್ಯ ಪ್ರತಿಯೊಬ್ಬ ಭಾರತೀಯ ಖಂಡಿಸಬೇಕಾದ ಕೃತ್ಯವಾಗಿದೆ. ಉಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವೃತ್ತಿಯಿಂದ ವಜಾ ಮಾಡಿ ಗಡಿ ಪಾರು ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡ ಭೈರನಾಯ್ಕನಹಳ್ಳಿ ಲೋಕೇಶ್ ಮಾತನಾಡಿ , ಮಲ್ಲಿಕಾರ್ಜುನ ಗೌಡ ಅವರಿಗೆ ನ್ಯಾಯಾಧೀಶರಾಗಿರಲು ಯಾವುದೇ ಅರ್ಹತೆ ಮತ್ತು ಸಾಮಾನ್ಯ ಜ್ಞಾನ, ತಿಳುವಳಿಕೆ ಇಲ್ಲ ಎಂದರು.
ಪ್ರತಿಭಟನೆಯಲ್ಲಿ ಮುಖಂಡರಾದ ಪೆದ್ದಿಹಳ್ಳಿನರಸಿಂಹಯ್ಯ, ಯಗಚ್ಚಿಕಟ್ಟೆ ರಾಘವೇಂದ್ರ, ಶಂಕರಪ್ಪ, ಸೈಫುಲ್ಲಾ , ಜಿ.ಕುಮಾರ್, ಲಿಂಗರಾಜು, ನಾಗತಿಹಳ್ಳಿ ಕೃಷ್ಣಮೂರ್ತಿ, ರಘು, ಮುಂತಾದವರು ಉಪಸ್ಥಿತರಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy