ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವ ವಿಚಾರವಾಗಿ ಸಂಸದ ರಮೇಶ ಜಿಗಜಿಣಗಿ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸೆಂಬ್ಲಿಯಲ್ಲೂ ನೋಡಿದ್ದೇವೆ, ಲೋಕಸಭೆಯಲ್ಲೂ ನೋಡಿದ್ದೇವೆ. ಕಳೆದ 75 ವರ್ಷಗಳಿಂದ ದಲಿತ ನಾಯಕರು ಮತ್ತೊಬ್ಬರ ಪರವಾಗಿ ಕೈ ಎತ್ತುತ್ತಲೇ ಬಂದವರು.
ಆದರೆ, ಅವರ ಪರವಾಗಿ ಯಾರೂ ಕೈ ಎತ್ತುತ್ತಿಲ್ಲ ಅನ್ನೋದು ದುಃಖದ ಸಂಗತಿ ಎನ್ನುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.


