ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ದರೆ ಗ್ರಾಮದಿಂದಲೇ ದಲಿತರನ್ನು ಬಹಿಷ್ಕಾರ ಮಾಡುವ ಅನಿಷ್ಟ ಪದ್ಧತಿಯನ್ನು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಿಕೇರಾ ಜಾತ್ರೆಯಲ್ಲಿ ಅನುಸರಿಸಲಾಗುತ್ತಿದೆ.
ಜಾತ್ರೆಯಲ್ಲಿ ಬಲಿ ಕೊಟ್ಟ ಕೋಣದ ಮಾಂಸವನ್ನು ದಲಿತರು ತಿನ್ನಲೇಬೇಕು. ಇಲ್ಲದಿದ್ದರೆ ಗ್ರಾಮದೊಳಗೆ ಪ್ರವೇಶವಿಲ್ಲ. ಈ ಅನಿಷ್ಟ ಪದ್ಧತಿ ತಡೆಯುವಂತೆ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ ಬಣ) ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಅವರು ಜಿಲ್ಲಾಧಿಕಾರಿ, ಎಸ್ ಪಿಗೆ ದೂರು ನೀಡಿದ್ದಾರೆ.


