nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025
    Facebook Twitter Instagram
    ಟ್ರೆಂಡಿಂಗ್
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    • ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
    • ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್‌ ಸಂಘ
    • ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
    • ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
    • ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 31ರಂದು ವರಕವಿ ದ.ರಾ.ಬೇಂದ್ರೆಯವರ ಜನ್ಮದಿನ
    ಲೇಖನ February 1, 2022

    ಜನವರಿ 31ರಂದು ವರಕವಿ ದ.ರಾ.ಬೇಂದ್ರೆಯವರ ಜನ್ಮದಿನ

    By adminFebruary 1, 2022No Comments2 Mins Read
    dara bendre

    ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರು ರಾಮಚಂದ್ರ ಬೇಂದ್ರೆ-ಅಂಬವ್ವನವರ ಪುತ್ರರಾಗಿ ೩೧-೧-೧೮೯೬ರಲ್ಲಿ ಧಾರವಾಡದಲ್ಲಿ ಜನಿಸಿದರು. ಧಾರವಾಡದಲ್ಲಿ ೧೯೧೩ರಲ್ಲಿ ಮೆಟ್ರಿಕ್ ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ೧೯೧೮ರಲ್ಲಿ ಬಿ.ಎ. ಮಾಡಿದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ೧೯೩೫ರಲ್ಲಿ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು.

    ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿ ಆಮೇಲೆ ೧೯೪೨ರಲ್ಲಿ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲಿನಲ್ಲಿ ಒಪ್ಪೊತ್ತಿನ ಶಿಕ್ಷಕರಾದರು. ೧೯೪೪ರಲ್ಲಿ ಸೊಲ್ಲಾಪುರದ ಡಿಎವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ೧೯೪೪ರಲ್ಲಿ ನೇಮಕಗೊಂಡರು. ೧೯೫೬ರಲ್ಲಿ ನಿವೃತ್ತರಾದ ಮೇಲೆ ಧಾರವಾಡದ ಆಕಾಶವಾಣಿ ಕೇಂದ್ರದಲ್ಲಿ ಸಲಹೆಗಾರರಾಗಿ ಕೆಲಸ ಮಾಡಿದರು.


    Provided by
    Provided by

    ಮುಂಬಯಿಯಲ್ಲಿ ನಡೆದ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಅಧ್ಯಕ್ಷರಾಗಿದ್ದರು. ೧೯೩೦ ರಲ್ಲಿ ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೇಖಕ ಗೋಷ್ಠಿಯನ್ನು ನಿರ್ವಹಿಸಿದರು. ಕೆಲವು ಕಾಲ ಜೀವನ ಮಾಸಪತ್ರಿಕೆ ಮತ್ತು ಜಯಕರ್ನಾಟಕ ಪತ್ರಿಕೆ ಸಂಪಾದಕರಾಗಿ ಸೇವೆ ಸಲ್ಲಿಸಿದರು.

    ಬೇಂದ್ರೆ ಅವರಿಗೆ ೧೯೬೮ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿತು. ೧೯೭೬ರಲ್ಲಿ ಕಾಶಿಯ ವಿದ್ಯಾಪೀಠವೂ ಗೌರವ ಡಾಕ್ಟರೇಟ್ ನೀಡಿತು. ಕೇಂದ್ರ ಸರ್ಕಾರ ೧೯೬೮ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿತು. ಕೇಂದ್ರದ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ಇವರಿಗೆ ಸಂದಿದೆ. ಅದಮಾರು ಮಠದವರು ಕರ್ನಾಟಕ ಕವಿಕುಲತಿಲಕ ಬಿರುದನ್ನು ೧೯೭೨ರಲ್ಲಿ ನೀಡಿದರು. ೧೯೪೩ರಲ್ಲಿ ಶಿವಮೊಗ್ಗದಲ್ಲಿ ನಡೆದ ೨೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಪಟ್ಟ ಇವರಿಗೆ ನೀಡಲಾಯಿತು. ೧೯೫೬ರಲ್ಲಿ ಅರಳು ಮರಳು ಕವನಸಂಗ್ರಹಕ್ಕೆ ಕೇಂದ್ರಸಾಹಿತ್ಯ ಅಕಾಡೆಮಿ ದೊರೆತರೆ ೧೯೭೪ರಲ್ಲಿ ನಾಕುತಂತಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ೧೯೬೭ರಿಂದ ರಾಜ್ಯ ಸರ್ಕಾರ ಗೌರವ ಮಾಶಾಸನ ನೀಡಿತು.

    ಪ್ರತಿಭಾವಂತ ದ.ರಾ. ಬೇಂದ್ರೆಯವರ ಕವನಗಳು ಕನ್ನಡ ಜನತೆಯನ್ನು ಮುಗ್ಧಗೊಳಿಸಿದೆ. ಗಾಯಕರು ಹಾಡಿ  ತಣಿದಿದ್ದಾರೆ. ಜನತೆ ಪದೇ ಪದೇ ಕೇಳಿ ಆನಂದಿಸುತ್ತಿದೆ. ಇಂಥ ಬೇಂದ್ರೆಯವರ ಕೃತಿಗಳಲ್ಲಿ ಕೆಲವು ಹೀಗಿವೆ.

    ಕೃಷ್ಣಕುಮಾರಿ, ಸಖೀಗೀತ, ಉಯ್ಯಾಲೆ, ಗರಿ, ನಾದಲೀಲೆ, ಅರುಳು ಮರುಳು ಇತ್ಯಾದಿ ೨೫ ಕವನ ಸಂಕಲನಗಳು. ಸಾಹಿತ್ಯ ಮತ್ತು ವಿಮರ್ಶೆ, ಕಾವ್ಯೋದ್ಯೋಗ, ಸಾಹಿತ್ಯ ವಿರಾಟ ಸ್ವರೂಪ, ನಾಕುತಂತಿ, ನಿರಾಭರಣ ಸುಂದರಿ, ಶಾಂತಲಾ (ಅನುವಾದ) ಇತ್ಯಾದಿ.

    ಅಂಬಿಕಾತನಯದತ್ತ ಕಾವ್ಯನಾಮದ ದ.ರಾ. ಬೇಂದ್ರೆಯವರು ೨೬-೧೦-೧೯೮೨ರಲ್ಲಿ ಮುಂಬಯಿಯಲ್ಲಿ ನಿಧನರಾದರು.

    yathish kumar

      ●ಯತೀಶ್ ಕುಮಾರ್, ತುಮಕೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !

    November 2, 2025

    ‘ನಮ್ಮ ತುಮಕೂರು’ ನಂಬಿಕೆಯ ಬೆಳಕು: 4ನೇ ವಾರ್ಷಿಕೋತ್ಸವದ ಶುಭಾಶಯಗಳು | ಆರ್.ಶೋಭಾ

    November 1, 2025

    ಒಮ್ಮೆ ನಮ್ಮ ಮುಂದಿನ ಭವಿಷ್ಯ ನೋಡುವ ಬನ್ನಿ…?

    October 24, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 

    November 14, 2025

    ಸರಗೂರು:  ಕನ್ನಡ ನಮ್ಮ ನಾಡಿನ ಹೆಮ್ಮೆಯ ಭಾಷೆ ಈ ಭಾಷೆ ಹಲವಾರು ಭಾಷೆಗಳಿಗೆ ತಾಯಿಯಾಗಿದೆ ಎಂದು ಪಶು ಸಂಗೋಪನಾ ಇಲಾಖೆ…

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ

    November 14, 2025

    ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ

    November 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.