nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ರಂಗೇರಿದ ಕೃಷಿ ಮೇಳ
    ರಾಜ್ಯ ಸುದ್ದಿ September 19, 2022

    ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ರಂಗೇರಿದ ಕೃಷಿ ಮೇಳ

    By adminSeptember 19, 2022No Comments2 Mins Read
    daravada

    ಧಾರವಾಡ, ಸೆಪ್ಟೆಂಬರ್‌, 19: ಮಹಾಮಾರಿ ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಕೃಷಿ ಮೇಳ ನಿಂತು ಹೋಗಿತ್ತು. ಇದೀಗ ಪ್ರತಿಷ್ಠಿತ ಧಾರವಾಡ ಕೃಷಿ ವಿಶ್ವ ವಿದ್ಯಾಲಯ ಕೃಷಿ ಮೇಳವನ್ನು ಸೆಪ್ಟೆಂಬ 17ರಿಂದ ಆರಂಭಿಸಿದೆ. ಸೆಪ್ಟೆಂಬರ್‌ 20ರವರೆಗೆ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಅದ್ಧೂರಿಯಾಗಿ ಈ ಮೇಳ ನಡೆಯಲಿದೆ.

    ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ದೀಪ ಬೆಳಗುವುದರ ಮೂಲಕ‌ ನಾಲ್ಕು ದಿನಗಳವರೆಗೆ ನಡೆಯುವ ಈ ವರ್ಷದ ಕೃಷಿ ಮೇಳಕ್ಕೆ ಚಾಲನೆ ನೀಡಿದ್ದರು. ‘ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೃಷಿ ತಾಂತ್ರಿಕತೆಗಳು’ ಎನ್ನುವ ಶೀರ್ಷಿಕೆ ಅಡಿಯಲ್ಲಿ ಆಯೋಜಿಸಲಾಗಿದ್ದು, ಬೀಜ ಮೇಳದ ಮೂಲಕ ರೈತರ ಹಬ್ಬಕ್ಕೆ ಚಾಲನೆ ನೀಡಲಾಗಿತ್ತು. ಕಳೆದ 2-3 ವರ್ಷಗಳಿಂದ ನೆರೆ ಹಾವಳಿ, ಕೋವಿಡ್‌ ಹೊಡೆತದಿಂದ ರದ್ದಾಗಿದ್ದ ಕೃಷಿ ಮೇಳಕ್ಕೆ ಈ ಬಾರಿ ಮತ್ತೆ ಕಳೆ ಬಂದಂತಾಗಿದೆ. ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಮಳಿಗೆಗಳು ಕಂಗೊಳಿಸುತ್ತಿವೆ.


    Provided by
    Provided by

    ನಾಲ್ಕು ದಿನಗಳವರೆಗೂ ನಡೆಯುವ ಈ ಮೇಳದಲ್ಲಿ ಸುಮಾರು 10 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ಕೃಷಿ ಹಾಗೂ ಕೃಷಿ ಪೂರಕ ತಂತ್ರಜ್ಞಾನಗಳೊಂದಿಗೆ ಬೀಜ ಮೇಳ-ಮತ್ಸ್ಯ ಮೇಳವೂ ಇರಲಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಆವರಣಗಳಲ್ಲಿ ಕೈಗೊಂಡ ಬೋಧನೆ, ಸಂಶೋಧನೆ, ವಿಸ್ತರಣಾ ಚಟುವಟಿಕೆಗಳ ಸಮಗ್ರ ಮಾಹಿತಿ ಮೇಳದಲ್ಲಿ ಸಿಗಲಿದೆ. ಅಲ್ಲದೇ ವಿಶ್ವವಿದ್ಯಾಲಯದಿಂದ ಬಿಡುಗಡೆ ಆದ ಮತ್ತು ಬಿಡುಗಡೆಯ ಹಂತದಲ್ಲಿರುವ ತಂತ್ರಜ್ಞಾನಗಳ ಬಗ್ಗೆ ರೈತರಿಗೆ ಮಾಹಿತಿಯನ್ನು ನೀಡಲಾಗಿದೆ.

    ಮೇಳದಲ್ಲಿ ಹೈಟೆಕ್‌ ಮಳಿಗೆಗಳು ಸಿದ್ಧಕೃಷಿ ವಸ್ತು ಪ್ರದರ್ಶನದಲ್ಲಿ 184 ಹೈಟೆಕ್‌ ಮಳಿಗೆಗಳು, 364 ಸಾಮಾನ್ಯ ಮಳಿಗೆಗಳು, 21 ಯಂತ್ರೋಪಕರಣ ಮಳಿಗೆಗಳು, 27 ಆಹಾರ ಮಳಿಗೆಗಳು, 54 ಜಾನುವಾರು ಪ್ರದರ್ಶನ ಮಳಿಗೆಗಳು, 9 ಕ್ಷೇತ್ರ ಮಳಿಗೆಗಳ ವ್ಯವಸ್ಥೆಯನ್ನು ಮಾಡಲಾಗಿದೆ. ರೈತರಿಗೆ ಕ್ಷೇತ್ರ ವೀಕ್ಷಣೆಗಾಗಿ ಕೃಷಿ ಮಹಾವಿದ್ಯಾಲಯ ಮುಖ್ಯ ಕಟ್ಟಡದಿಂದ ಪ್ರತಿ 15 ನಿಮಿಷಕ್ಕೆ ವಾಹನದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ವಿಮಾ ವ್ಯಾಪ್ತಿಗೆ ಕೃಷಿ ಮೇಳದ ಆವರಣ ಒಳಪಡಿಸಲಾಗಿದ್ದು, ಸನ್ನದ್ಧ ಸ್ಥಿತಿಯಲ್ಲಿರುವ ಅಗ್ನಿಶಾಮಕ ವಾಹನ ಇರಲಿದೆ. ಮೊಬೈಲ್‌ ಎಟಿಎಂ ವಾಹನಗಳು, ಕ್ಷೇತ್ರ ಪ್ರಾತ್ಯಕ್ಷಿಕೆಗಳಿಗೆ ಭೇಟಿ, ಉಚಿತ ವೈದ್ಯಕೀಯ ಸಲಹಾ ಕೇಂದ್ರ, ಸಾರಿಗೆ ನಿರ್ವಹಣಾ ವ್ಯವಸ್ಥೆ, ಪೊಲೀಸ್‌ ಸಹಾಯ ಕೇಂದ್ರಗಳು ಇರಲಿವೆ.

    ಮಳೆ ನೀರು ಕೊಯ್ಲು ಮತ್ತು ಅಂತರ್ಜಲ ಮರುಪೂರಣ, ಅಧಿಕ ಇಳುವರಿ ಮತ್ತು ನೀರಿನ ಉಳಿತಾಯಕ್ಕಾಗಿ ಸುಧಾರಿತ ನೀರಾವರಿ ಪದ್ಧತಿಗಳು, ಸಂಪನ್ಮೂಲ ಸಂರಕ್ಷಣೆಗಾಗಿ ಸಮಗ್ರ ಜಲಾನಯನ ಅಭಿವೃದ್ಧಿ, ಸಮಗ್ರ ಬೆಳೆ, ಪೋಷಕಾಂಶ, ಪೀಡೆಗಳ ನಿರ್ವಹಣೆ, ಕೃಷಿಯಲ್ಲಿ ಜೈವಿಕ ಹಾಗೂ ನ್ಯಾನೋ ತಂತ್ರಜ್ಞಾನಗಳ ಬಳಕೆ, ದ್ವಿದಳ ಧಾನ್ಯಗಳ ಉತ್ಪಾದನೆ, ಮೌಲ್ಯವರ್ಧನೆ, ಹೈಟೆಕ್‌ ತೋಟಗಾರಿಕೆ, ಮಣ್ಣು ರಹಿತ ಬೇಸಾಯ, ಸುಗಂಧ ಮತ್ತು ಔಷಧ ಬೆಳೆಗಳು, ಫಲ-ಪುಷ್ಪಗಳ ಪ್ರದರ್ಶನ, ಅಲಂಕಾರಿಕ ಮೀನು ಸಾಕಾಣಿಕೆ, ಮತ್ಸ್ಯ ಸಸ್ಯ ಸಂಗಮ, ಮೀನು ಮತ್ತು ಸಿಗಡಿ ಸಾಕಣೆ ಹಾಗೂ ಅಲಂಕಾರಿಕ ಮೀನುಗಳ ಪ್ರದರ್ಶನ ಮೇಳದಲ್ಲಿ ಗಮನ ಸೆಳೆಯಲಿವೆ.

    ಬೀಜಗಳ ಜೊತೆಗೆ ಜೈವಿಕ ಗೊಬ್ಬರ ಮಾರಾಟಮೇಳದಲ್ಲಿ 333 ಕ್ವಿಂಟಲ್‌ ಜೋಳ, 344 ಕ್ವಿಂಟಲ್‌ ಗೋಧಿ, 1,445 ಕ್ವಿಂಟಲ್‌ ಕಡಲೆ, 39 ಕ್ವಿಂಟಲ್‌ ಕುಸುಮೆ ಮತ್ತು 1 ಕ್ವಿಂಟಲ್‌ ಸಾಸಿವೆ ಒಟ್ಟು 2,161 ಕ್ವಿಂಟಲ್‌ ಬೀಜ ಪ್ರಸಕ್ತ ಕೃಷಿ ಮೇಳದಲ್ಲಿ ಮಾರಾಟಕ್ಕೆ ಲಭ್ಯವಿದೆ. ವಿಶ್ವವಿದ್ಯಾಲಯಕ್ಕೆ ಪ್ರಪ್ರಥಮ ಬಾರಿಗೆ ಜೈವಿಕ ಕೃಷಿ ಪರಿಕರಗಳ ಉತ್ಪನ್ನ ಹಾಗೂ ಮಾರಾಟಕ್ಕೆ ಪರವಾನಿಗೆ ಪತ್ರ ದೊರೆತಿದೆ. ಈ ಹಿನ್ನೆಲೆಯಲ್ಲಿ 847 ಕೆ.ಜಿ. ವಿವಿಧ ಪ್ರಕಾರದ ಜೈವಿಕ ಗೊಬ್ಬರಗಳ ಪುಡಿ, 410 ಲೀಟರ್‌ ವಿವಿಧ ಪ್ರಕಾರದ ಜೈವಿಕ ಗೊಬ್ಬರದ ದ್ರವಗಳು ಪ್ರಸಕ್ತ ಕೃಷಿ ಮೇಳದಲ್ಲಿ ಮಾರಾಟಕ್ಕೆ ಲಭ್ಯವಿದೆ.

    ಮೇಳದಲ್ಲಿ ಈ ಬಾರಿ ದನಕರುಗಳಿಗಳಿಲ್ಲ ಅವಕಾಶಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ 7 ಜಿಲ್ಲೆಗಳಿಂದ 2021-22ನೇ ಸಾಲಿಗೆ ಆಯ್ಕೆ ಆದ ಶ್ರೇಷ್ಠ ಕೃಷಿಕ ಮತ್ತು ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇದೇ ಮೊದಲ ಬಾರಿ ಮೇಳದಲ್ಲಿ ನೀಡುತ್ತಿದ್ದ ತಾಲೂಕುವಾರು ಯುವ ಕೃಷಿಕ ಹಾಗೂ ಮಹಿಳೆ ಪ್ರಶಸ್ತಿಯನ್ನು ಕೈಬಿಡಲಾಗಿದೆ. ಇನ್ನು ಇದೇ ಮೊದಲ ಬಾರಿಗೆ ಸಾಂಕ್ರಾಮಿಕ ರೋಗ ಹಿನ್ನೆಲೆ ಜಾನುವಾರು ಪ್ರದರ್ಶನದಲ್ಲಿ ದನಕರುಗಳಿಗೆ ಅವಕಾಶ ನೀಡಿಲ್ಲ. ಶ್ವಾನ ಸೇರಿದಂತೆ ಬರೀ ಸಾಕು ಪ್ರಾಣಿಗಳಿಗಷ್ಟೇ ಅವಕಾಶ ನೀಡಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ…

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.