ಬೆಳಗಾವಿ: ಬೆಳಗಾವಿಯ ಕೆಎಲ್‌ಇಎಸ್ ಆಸ್ಪತ್ರೆಗೆ ನಸುಕಿನ ಜಾವದಲ್ಲಿ ಜೀವಂತ ಹೃದಯ ಸಾಗಿಸುವಲ್ಲಿ ವೈದ್ಯರ ತಂಡ ಯಶಸ್ವಿಯಾಯಿತು.
ಆಪಘಾತದಿಂದಾಗಿ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಿಸಿದ್ದ ವ್ಯಕ್ತಿಯೊಬ್ಬರ ಮಿದುಳು ನಿಷ್ಕ್ರಿಯಗೊಂಡಿತ್ತು. ಅವರ ಕುಟುಂಬ ವರ್ಗದವರೊಂದಿಗೆ ಚರ್ಚಿಸಿದ ವೈದ್ಯರು ಹೃದಯ ದಾನ ಮಾಡಲು ಪ್ರೇರೇಪಿಸಿದರು.
ಶುಕ್ರವಾರ ನಸುಕಿನ 4ಗಂಟೆ ಸುಮಾರಿಗೆ ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ತರಲಾಯಿತು. ಹೃದ್ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಯಶಸ್ವಿ ಕಸಿ ಮಾಡಲಾಯಿತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪೊಲೀಸ್ ಸಿಬ್ಬಂದಿ ಜೀರೊ ಟ್ರಾಫಿಕ್ ನಿರ್ಮಾಣ ಮಾಡಿ ಸಹಕರಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy