ತಿಪಟೂರು: ರಾಜಕೀಯ ಪಕ್ಷಗಳು ಧರ್ಮ, ಜಾತಿಗಳ ಅಮಲು ತುಂಬು ಬದಲು ವಿದ್ಯೆಯೊಂದಿಗೆ ಕೌಶಲ್ಯ ವೃದ್ಧಿಸುವ ಕೆಲಸ ಮಾಡಬೇಕು ಎಂದು ಜನ ಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ. ಶಶಿಧರ್ ಹೇಳಿದರು.
ನಗರದ ಬಯಲು ಮಂದಿರದಲ್ಲಿ ನಡೆದ ಯುವ ಜನ ಸ್ಪಂದನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, 25 ವರ್ಷಗಳ ಹಿಂದೆ ತೆರಿಗೆ ಸಂಗ್ರಹಣೆಯಲ್ಲಿ ದಾವಣಗೆರೆ ನಂತರ ತಿಪಟೂರು ಎರಡನೇ ಸ್ಥಾನದಲ್ಲಿತ್ತು. ಇದೀಗ ತಿಪಟೂರು ತೆರಿಗೆಯಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ, ಸಮೀಪದ ಮಾಲೂರು ಊಹಿಸಲು ಸಾಧ್ಯವಾಗದಷ್ಟು ಅಭಿವೃದ್ಧಿಯಾಗಿಧೆ. ಎಷ್ಟೋ ಕೈಗಾರಿಕೆಗಳು ಮಾಲೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಇಲ್ಲಿ ಸಹಾಯವಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಪ್ರವೀಣ್ ನಾಯರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿ, ಡಾ. ದಿವಾಕರ್, ಮನೋಜಮ್ನಿಕೃಷ್ಣ, ಉನ್ನತಿ ಸಂಸ್ಥೆಯ ಅಧ್ಯಕ್ಷ ರಮೇಶ ಸ್ವಾಮಿ, ಸಾವಿರಾರು ಯುವಕ ಯುವತಿಯರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy