ಬೆಂಗಳೂರು: ನಟ ದರ್ಶನ್ ಅವರು ಜೈಲಿನಲ್ಲಿ ಐಶಾರಾಮಿ ಜೀವನ ನಡೆಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ದಾಸ ಟೀ ಪಾರ್ಟಿ ನಡೆಸಿದ್ದು, ವಿಡಿಯೋ ಕಾಲ್ ಗಳಲ್ಲಿ ನಟ ದರ್ಶನ್ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ದರ್ಶನ್ ಫೋಟೋ, ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ 7 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಘಟನೆಯಲ್ಲಿ ಹಿರಿಯ ಅಧಿಕಾರಿಗಳ ಪಾತ್ರ ಇದ್ದರೆ ಅವರ ವಿರುದ್ಧವೂ ಕ್ರಮಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಜೈಲರ್ ಗಳಾದ ಶರಣಬಸವ ಅಮೀನ್ಗಢ, ಖಂಡೇವಾಲ್, ಸಹಾಯಕ ಜೈಲರ್ ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್ ತಲವಾರ್, ಜೈಲಿನ ಹೆಡ್ ವಾರ್ಡರ್ಗಳಾದ ವೆಂಕಪ್ಪ, ಸಂಪತ್, ವಾರ್ಡರ್ ಬಸಪ್ಪ ಅವರನ್ನು ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ.
ದರ್ಶನ್ ಅವರನ್ನು ನಿಯಂತ್ರಣಕ್ಕೆ ತರಲು ಜೈಲಧಿಕಾರಿಗಳು ಮಹತ್ವದ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ದರ್ಶನ್ ಅವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಚಿಂತನೆ ನಡೆದಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q