ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾ ಗೌಡ ಮತ್ತು ತಂಡದ ವಿಚಾರಣೆಯನ್ನು ಕೋರ್ಟ್ ಎಪ್ರಿಲ್ 8ಕ್ಕೆ ಮುಂದೂಡಿದೆ.
57ನೇ ಸೆಷನ್ಸ್ ಕೋರ್ಟ್ ನಲ್ಲಿ ಆರೋಪಿಗಳಾದ ಪವಿತ್ರ ಗೌಡ, ದರ್ಶನ್ ಮತ್ತು ಗ್ಯಾಂಗ್ ನ ವಿಚಾರಣೆ ನಡೆಯಿತು. ಕೋರ್ಟ್ನಲ್ಲಿ ಪೊಲೀಸರ ವಿರುದ್ಧ ದರ್ಶನ್ ಪರ ವಕೀಲರ ಆರೋಪ ಮಾಡಿದರು.
ಇತರೆ ಆರೋಪಿಗಳನ್ನು ಮಾಫಿ ಸಾಕ್ಷಿ ಆಗಲು ಪೊಲೀಸರು ಒತ್ತಡ ಹೇರುತ್ತಿದ್ದಾರೆ. ಬೇರೆ ಆರೋಪಿಗಳಿಗೆ ಮಾಫಿ ಸಾಕ್ಷಿ ಆಗಿ ಅಂತ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದರು.
ವಾದವನ್ನು ಆಲಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ. ಏಪ್ರಿಲ್ 8 ಕ್ಕೆ ವಿಚಾರಣೆ ಮುಂದೂಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4