ತುಮಕೂರು: ನಟ ದರ್ಶನ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಾಲ್ವರು ಆರೋಪಿಗಳನ್ನ ತುಮಕೂರಿನ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
24ನೇ ಎಸಿಎಂಎಂ ಕೋರ್ಟ್ ಆದೇಶ ಹಿನ್ನೆಲೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಯಿತು. ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ತಂದು ಇರಿಸಲಾಗಿದೆ.
ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನ ಸ್ಥಳಾಂತರ ಮಾಡಲಾಯಿತು.
ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನ ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA