ಹೆಚ್.ಡಿ.ಕೋಟೆ: ದರ್ಶನ್ ಧ್ರುವನಾರಾಯಣ್ ಅವರನ್ನು ಗೆಲ್ಲಿಸಿ ಎಂದು ಹೆಚ್.ಡಿ.ಕೋಟೆ ಜೆಡಿಎಸ್ ಅಭ್ಯರ್ಥಿ ಜಯಪ್ರಕಾಶ್ ಚಿಕ್ಕಣ್ಣ ನಂಜನಗೂಡು ಜನತೆಗೆ ವಿಶೇಷ ಮನವಿ ಮಾಡಿಕೊಂಡರು.
ಹೆಚ್.ಡಿ.ಕೋಟೆ ಪಟ್ಟಣದ ಹ್ಯಾಂಡ್ ಪೋಸ್ಟ್ ನಲ್ಲಿ ನಮ್ಮ ತುಮಕೂರು ವಾಹಿನಿಯ ಜೊತೆ ಮಾತನಾಡಿದ ಅವರು, ಈ ಬಾರಿ ಚುನಾವಣೆಗೆ ಸ್ಪರ್ಧಿಸಿರುವ ಧ್ರುವನಾರಾಯಣ್ ಅವರಿಗೆ ರಾಜಕೀಯ ಭವಿಷ್ಯ ನೀಡಬೇಕು ಎನ್ನುವ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠರು ನಂಜನಗೂಡು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ, ತಂದೆ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿರುವ ದರ್ಶನ್ ಧ್ರುವನಾರಾಯಣ್ ಅವರಿಗೆ ನೀವೇ ತಂದೆತಾಯಿ ಎಂದು ತಿಳಿದು ಅವರನ್ನು ಬೆಂಬಲಿಸಿ, ನನ್ನ ಜೊತೆಗೆ ವಿಧಾನ ಸೌಧಕ್ಕೆ ಕಳುಹಿಸಿಕೊಡಿ ಎಂದು ಅವರು ಮತದಾರರಿಗೆ ಮನವಿ ಮಾಡಿಕೊಂಡರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


