ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು. ಇದೇ ವೇಳೆ ಮುಂದಿನ ವಿಚಾರಣೆಯನ್ನು ಕೋರ್ಟ್ ಸೆಪ್ಟಂಬರ್ 27ಕ್ಕೆ ಮುಂದೂಡಿದೆ.
ಇನ್ನೊಂದೆಡೆ ಎ1 ಪವಿತ್ರಾ ಗೌಡ ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದು, ಅವರ ಜಾಮೀನು ಅರ್ಜಿಯನ್ನು ಸೆಪ್ಟಂಬರ್ 25ಕ್ಕೆ ಮುಂದೂಡಲಾಗಿದೆ.
ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆ ಎಸ್ ಪಿಪಿ ಪ್ರಸನ್ನ ಕುಮಾರ್ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋಡಿರುವ ಹಿನ್ನೆಲೆ, ನ್ಯಾಯಾಲಯ ಅವಕಾಶ ನೀಡಿದೆ.
ಹೀಗಾಗಿ ಪವಿತ್ರ ಗೌಡ ಹಾಗೂ ದರ್ಶನ್ ಜಾಮೀನು ಅರ್ಜಿಯನ್ನು ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಆದೇಶ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q