ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ಹೆಸರುವಾಸಿಯಾಗಿದ್ದ ಅರ್ಜುನನ ಸಮಾಧಿ ಕುರಿತಂತೆ ನಟ ದರ್ಶನ್ ನಿನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿದ್ದಾರೆ.
ಸಮಾಧಿ ಸಲ್ಲಬೇಕಾದ ಗೌರವ ನೀಡಿ ಎಂದು ಬರೆದುಕೊಂಡಿದ್ದರು. ನಟನ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದರ್ಶನ್ ಅವರ ಪ್ರಾಣಿ ಪ್ರೀತಿಗೆ ಅಭಿಮಾನಿಗಳು ಮತ್ತು ಪ್ರಾಣಿ ಪ್ರಿಯರು ಜೈ ಹೋ ಎಂದಿದ್ದಾರೆ.
ಅರ್ಜುನ್ ಗೆ ಸಿಗಬೇಕಾದ ಗೌರವವನ್ನು ಕೂಡಲೇ ಸಲ್ಲಿಸಬೇಕು ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ಸ್ವತಃ ಪ್ರಾಣಿ ಪ್ರಿಯರೂ ಆಗಿರುವ ದರ್ಶನ್, ಮೈಸೂರು ಮೃಗಾಲಯ ಸೇರಿದಂತೆ ನಾನಾ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಅವರು ದತ್ತು ಪಡೆದಿದ್ದಾರೆ. ಜೊತೆಗೆ ಮನೆಯಲ್ಲೂ ಹಲವು ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಅದರಲ್ಲೂ ಆನೆಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಕಾಟೇರ ಸಿನಿಮಾವನ್ನು ಹುತಾತ್ಮ ಆನೆ ಅರ್ಜುನ್ ಗೆ ಅರ್ಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296