ನಟ ದರ್ಶನ್ ಅವರು ಜೈಲು ಪಾಲಾದ ಬೆನ್ನಲ್ಲೇ ಅವರ ಸೋಷಿಯಲ್ ಮೀಡಿಯಾವನ್ನು ತಾನೇ ಹ್ಯಾಂಡಲ್ ಮಾಡುವುದಾಗಿ ಪತ್ನಿ ವಿಜಯಲಕ್ಷ್ಮೀ ಘೋಷಿಸಿದ್ದು, ದರ್ಶನ್ ಹಾಗೂ ಸಿನಿಮಾ ಬಗ್ಗೆ ತಾವೇ ಅಪ್ಡೇಟ್ ನೀಡುವುದಾಗಿ ಅವರು ಹೇಳಿದ್ದಾರೆ.
ನಿಮ್ಮ ಚಾಲೆಂಜಿಂಗ್ ಸ್ಟಾರ್ ಹೃದಯದಲ್ಲಿ ನೀವೆಲ್ಲರೂ ಇದ್ದೀರಿ. ಅವರು ನೇರವಾಗಿ ನಿಮ್ಮನ್ನು ಸಂಪರ್ಕಿಸುವ ತನಕ ನಾನು ಅವರ ಸೋಶಿಯಲ್ ಮೀಡಿಯಾ ಖಾತೆಯನ್ನು ನಿರ್ವಹಿಸುತ್ತೇನೆ. ಅವರ ಪರವಾಗಿ ಅಪ್ ಡೇಟ್ ನೀಡುತ್ತೇನೆ ಮತ್ತು ಸಿನಿಮಾ ಪ್ರಮೋಷನ್ ಮಾಡುತ್ತೇನೆ’ ಎಂದು ವಿಜಯಲಕ್ಷ್ಮಿ ದರ್ಶನ್ ಅವರು ಪೋಸ್ಟ್ ಮಾಡಿದ್ದಾರೆ.
ಪ್ರೀತಿ, ಪ್ರಾರ್ಥನೆ ಮತ್ತು ತಾಳ್ಮೆ ತೋರಿಸುವುದನ್ನು ನೀವು ಮುಂದುವರಿಸಿದರೆ ಅದು ದರ್ಶನ್ ಅವರಿಗೆ ಮತ್ತು ನಮ್ಮ ಕುಟುಂಬಕ್ಕೆ ಬಲ ನೀಡುತ್ತದೆ. ಪಾಸಿಟಿವ್ ಆಗಿರೋಣ, ಒಂದಾಗಿರೋಣ. ನಿಮಗೆ ತಿಳಿದಿರುವ ಅದೇ ಪ್ರೀತಿ ಮತ್ತು ಎನರ್ಜಿಯೊಂದಿಗೆ ಅವರು ಆದಷ್ಟು ಬೇಗ ವಾಪಸ್ ಬರುತ್ತಾರೆ’ ಎಂದು ಹೇಳುವ ಮೂಲಕ ವಿಜಯಲಕ್ಷ್ಮಿ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC