ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಾಲಕುಂಟೆ ಕೆರೆಯು 20 ವರ್ಷಗಳ ನಂತರ ಕೋಡಿ ಬಿದ್ದು ಮೈದುಂಬಿ ಹರಿಯುತ್ತಿರುವುದು ಕಂಡು ಬಂದಿದೆ.
80 ಎಕರೆ ಅಧಿಕ ವಿಸ್ತೀರ್ಣ ಹೊಂದಿದ ಕೆರೆ ಇದಾಗಿದೆ. 2015 ರಲ್ಲಿ ಅರ್ಧ ಭಾಗದಷ್ಟು ಮಾತ್ರ ಈ ಕೆರೆಯು ತುಂಬಿತ್ತು. ಆ ಸಂದರ್ಭದಲ್ಲಿ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಮಠದ ಶ್ರೀಗಳಾದ ವೀರಭದ್ರ ಶಿವಾಚಾರ್ಯ ಸ್ವಾಮೀಜಿರವರು ಬಾಗಿನ ಅರ್ಪಿಸಿದ್ದರು.
ಸುಮಾರು 16 ಹಳ್ಳಿಗಳ ಜೀವನಾಡಿಯಾಗಿರುವ ದಾಸಾಲಕುಂಟೆ ಕೆರೆ ಕೋಡಿ ಬಿದ್ದಿರುವುದನ್ನು ವೀಕ್ಷಿಸಲು ಜನರು ಆಗಮಿಸುತ್ತಿದ್ದಾರೆ. ಕೆರೆ ಸಂಪೂರ್ಣವಾಗಿ ತುಂಬಿ ಹರಿಯುತ್ತಿರುವುದನ್ನು ಕಂಡು ಊರಿನ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz