nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

    February 16, 2026

    ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!

    February 16, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    • ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
    • ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಸರಾ ದರ್ಶನ’ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ.
    ರಾಜ್ಯ ಸುದ್ದಿ September 28, 2022

    ದಸರಾ ದರ್ಶನ’ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ.

    By adminSeptember 28, 2022No Comments2 Mins Read
    dasara1

    ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನೋಡಿರದ ಗ್ರಾಮೀಣ ಜನತೆಗೆ ದಸರಾ ವೀಕ್ಷಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹಮ್ಮಿಕೊಂಡಿರುವ “ದಸರಾ ದರ್ಶನ” ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ಬಾವುಟ ತೋರುವ ಮೂಲಕ ಚಾಲನೆ ನೀಡಿದರು.
    ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಮೈಸೂರು ಜಿಲ್ಲೆಯ 9 ತಾಲ್ಲೂಕಿನ ಮಹಿಳೆಯರು, ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಗ್ರಾಮೀಣ ಜನತೆಯನ್ನು ಕರೆತಂದು ದಸರಾವನ್ನು ದರ್ಶನ ಮಾಡಿಸುತ್ತಿರುವುದು ನಿಜಕ್ಕೂ ಉತ್ತಮ ಕಾರ್ಯ ಎಂದು ಹೇಳಿದರು.

    ಇಂದಿನಿಂದ 3 ದಿನಗಳ ಕಾಲ ನಿಗಮದ 81 ವಾಹನಗಳಲ್ಲಿ ಸುಮಾರು 4455 ಜನತೆಯನ್ನು ಕರೆತಂದು ಅರಮನೆ, ಮೃಗಾಲಯ, ಜೆ.ಕೆ.ಗ್ರೌಂಡ್ಸ್ ನಲ್ಲಿ ನಡೆಯುವ ಮಹಿಳಾ ಮತ್ತು ಮಕ್ಕಳ ದಸರಾ ವೀಕ್ಷಿಸಲು ಮತ್ತು ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.
    ದಸರಾ ಆಕರ್ಷಣೆಯಾದ ದೀಪಾಲಂಕಾರವನ್ನು ತೋರಿಸಿ ಪುನಃ ಮರಳಿ ಅವರವರ ತಾಲ್ಲೂಕುಗಳಿಗೆ ಮರಳಿ ಬಿಡಲಾಗುತ್ತದೆ ಎಂದರು.


    Provided by
    Provided by

    ದಸರಾಗೆ ಸಾರಿಗೆ ಸಚಿವರು ಗೈರಾದ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಲಾಖೆಯವರು ಸಚಿವರಿಗೆ ಆಹ್ವಾನ ನೀಡಿದ್ದರು. ಶ್ರೀರಾಮುಲು ಅವರು ಯಾವ ಕಾರ್ಯಕ್ರಮಕ್ಕೂ ಗೈರಾದ ಉದಾಹರಣೆ ಇಲ್ಲ. ಆದರೆ ಅನಿವಾರ್ಯ ಕಾರಣಗಳಿಂದ ಗೈರಾಗಿದ್ದರು ಎಂದು ಹೇಳಿದರು.

    ದಸರಾ ಕಾರ್ಯಕ್ರಮಗಳನ್ನು ಸುಸೂತ್ರವಾಗಿ ನೆರವೇರಿಸಲು 21 ಸಮಿತಿಗಳನ್ನು ರಚಿಸಿದ್ದು ಅವುಗಳ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಲಾಗಿದೆ. ಅವ್ಯವಸ್ಥೆ ಆಗದಂತೆ ಸಾರ್ವಜನಿಕರ ಸಲಹೆ ಸೂಚನೆ ಪಡೆದುಕೊಳ್ಳಲಾಗುತ್ತಿದೆ. ಅಧಿಕಾರಿಗಳ ಜೊತೆಗೆ ಅಧಿಕಾರೇತರರನ್ನು ಸೇರಿಸಿಕೊಂಡು ದಸರಾ ಯಶಸ್ವಿಗೊಳಿಸುವಂತೆ ಸೂಚಿಸಲಾಗಿದೆ.

    ನಿನ್ನೆ ರಾತ್ರಿ ನಗರಪ್ರದಕ್ಷಿಣೆ ಮಾಡಿ ಸ್ವಚ್ಚತಾ ಕಾರ್ಯ ಪರಿಶೀಲನೆ ನಡೆಸಲಾಯಿತು. ಸ್ವಚ್ಚತಾ ಟೀಮ್ ಬೆಳಗ್ಗೆ 3 ಗಂಟೆಯವರೆಗೆ ಕೆಲಸ ಮಾಡುತ್ತಿದ್ದಾರೆ. ಆಹಾರ ಮೇಳಕ್ಕೆ 25 ರಿಂದ 30 ಸಾವಿರಕ್ಕೂ ಹೆಚ್ಚು ಜನ ಆಗಮಿಸಿದ್ದರು. ಯಾವುದೇ ಆಹಾರ ಪದಾರ್ಥ ವ್ಯರ್ಥ ಆಗಿಲ್ಲ. ಅಂದಿನ ದಿನದ ಕಸವನ್ನು ಅಂದೇ ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಶಾಸಕರುಗಳಾದ ರಾಮದಾಸ್, ನಾಗೇಂದ್ರ, ಉಪಮೇಯರ್ ರೂಪಾ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    2008ರಿಂದ ದಸರಾ ದರ್ಶನ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ. ಪ್ರತಿ ವಾಹನದಲ್ಲಿ ಒಬ್ಬ ಮೇಲ್ವಿಚಾರಕ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    ಸರಗೂರು:  ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಸ್ವಾಮಿಗೆ ಪವಿತ್ರ ಗಂಗಾ ಜಲದಿಂದ ಅಭಿಷೇಕ…

    ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

    February 16, 2026

    ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!

    February 16, 2026

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.