ಹೆಚ್.ಡಿ.ಕೋಟೆ: ಪಟ್ಟಣದ ವರದರಾಜಸ್ವಾಮಿ ದೇವಾಲಯದ ಮುಂಭಾಗ ಗ್ರಾಮೀಣ ದಸರಾ ಮಹೋತ್ಸವ ಮೆರವಣಿಗೆಗೆ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಆದಿವಾಸಿ ಮಹಿಳೆ ಸೋಮಮ್ಮ ಚಾಲನೆ ನೀಡಿದರು.
ವರದರಾಜಸ್ವಾಮಿ ದೇವಾಲಯದ ಮುಂಭಾಗ ಗುರುವಾರ ಪಟ್ಟಣದಲ್ಲಿ ಗ್ರಾಮೀಣ ದಸರಾ ಹಿನ್ನೆಲೆಯಲ್ಲಿ ಸ್ವಚ್ಛತೆ ಕಾರ್ಯಗಳನ್ನು ಕೈಗೊಂಡಿದ್ದು, ಪಟ್ಟಣದಾದ್ಯಂತ ಬೀದಿಗಳಲ್ಲಿ ಮಹಿಳೆಯರು ರಂಗೋಲಿ ಹಾಕಿ ಅಲಂಕೃತಗೊಳಿಸಿದರು.
ಪ್ರಮುಖ ವೃತ್ತಗಳಲ್ಲಿ ವಿಶೇಷವಾದ ಅಲಂಕಾರ ಹಾಗೂ ವಿವಿಧ ಇಲಾಖೆಗಳಿಂದ ಸರ್ಕಾರದ ಸಾಧನೆ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವಂತಹ ಫ್ಲೆಕ್ಸ್ ಫಲಕಗಳನ್ನು ಹಾಕುವ ಮೂಲಕ ವ್ಯವಸ್ಥೆ ಕಲ್ಪಿಸಲಾಗಿತ್ತು.
ಪಟ್ಟಣದ ಮಿನಿ ವಿಧಾನಸೌಧದ ಮಿನಿ ಆವರಣದಲ್ಲಿ ಪಟ್ಟಣದಲ್ಲಿ ಗುರುವಾರ ತೆರೆದ ವಾಹನದಲ್ಲಿ ಶ್ರೀ ಚಾಮುಂಡೇಶ್ವರಿ ಭಾವಚಿತ್ರವನ್ನು ಇಟ್ಟು ವಿಶೇಷ ಹಸಿರು ತೋರಣ ಹೂವಿನ ಅಲಂಕಾರಗಳಿಂದ ಶೃಂಗರಿಸಿ ಕಲಾತಂಡದೊಂದಿಗೆ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ಆದಿವಾಸಿ ಮಹಿಳೆ ಸೋಮಮ್ಮ ರವರು ತಾಲೂಕು ಮಟ್ಟದ ಅಧಿಕಾರಿಗಳ ಜೊತೆಗೂಡಿ ಅಲಂಕೃತ ವಾಹನದಲ್ಲಿ ಇರಿಸಿದ ಚಾಮುಂಡೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಪಟ್ಟಣದಲ್ಲಿ ಗ್ರಾಮೀಣ ದಸರಾ ಮಹೋತ್ಸವ ಮೆರವಣಿಗೆಯಲ್ಲಿ ವೀರಗಾಸೆ, ಕಂಸಾಳೆ, ಮಂಗಳವಾದ್ಯ ತಮಟೆ, ನಗಾರಿ ಇತರೆ ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ಅಂಬೇಡ್ಕರ್ ಭವನದಲ್ಲಿ ಅಂತ್ಯಗೊಳಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ತಹಶೀಲ್ದಾರ್ ರವರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಸಮಾಜಕಲ್ಯಾಣಾಧಿಕಾರಿ ರಾಮಸ್ವಾಮಿ, ಕೃಷಿ ಅಧಿಕಾರಿ ರಂಗಸ್ವಾಮಿ, ಪರಿಶಿಷ್ಟ ಪಂಗಡದ ಕಲ್ಯಾಣಾಧಿಕಾರಿ ನಾರಾಯಣಸ್ವಾಮಿ ಇದ್ದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


