ತುಮಕೂರು: ಮನುಷ್ಯನು ಸದೃಢಗೊಂಡು ಆರೋಗ್ಯವಂತನಾಗಿ ಜೀವಿಸಲು ಕ್ರೀಡೆಗಳು ಸಹಕಾರಿಯಾಗಿದ್ದು, ಜಿಲ್ಲೆಯ ಯುವಕ/ಯುವತಿಯರಿಗೆ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಟ್ಟು ಕ್ರೀಡಾ ಮನೋಭಾವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ದಸರಾ ಕ್ರೀಡಾಕೂಟದ ಅಂಗವಾಗಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿಂದು ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯವೇ ಭಾಗ್ಯ ಎಂಬುದು ಕನ್ನಡದ ಜನಪ್ರಿಯ ಗಾದೆಯಾಗಿದೆ. ಮನುಷ್ಯನ ದೇಹ ಮತ್ತು ಮನಸ್ಸುಗಳು ಆರೋಗ್ಯವಾಗಿರಲು ಕ್ರೀಡೆಗಳು ಪ್ರಯೋಜನಕಾರಿಯಾಗಿವೆ ಎಂದರು.
ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರು ಸ್ವತಃ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಪಾಲ್ಗೊಂಡರು.
ಯುವ ಜನ ಕ್ರೀಡಾ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಜಿಲ್ಲಾ ಬ್ಯಾಡ್ಮಿಂಟನ್ ಕಾರ್ಯದರ್ಶಿ ಚಿದಾನಂದ್, ಟಿಡಿಬಿಬಿಎ ಕಾರ್ಯದರ್ಶಿ ದಿವಾಕರ್, ಖ್ಯಾತ ಕಬ್ಬಡಿ ಕೋಚ್ ಇಸ್ಮಾಯಿಲ್ ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296