ರಾಜ್ಯದಲ್ಲಿ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಜುಲೈ 15ರಿಂದ 26ರವರೆಗೆ ಅಧಿವೇಶನ ನಡೆಯಲಿದೆ.
ಈ ಬಾರಿ 10 ದಿನಗಳ ಕಾಲ ಮುಂಗಾರು ಅಧಿವೇಶನ ನಡೆಯಲಿದ್ದು ಹಲವು ವಿಚಾರಗಳು ಚರ್ಚೆಗೆ ಬರಲಿವೆ. ಈ ಕುರಿತು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದ್ದು , ಕರ್ನಾಟಕ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ದಿನಾಂಕ: 15.07.2024 ರಿಂದ 26.07.2024 ರವರೆಗೆ ಕರೆಯಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜೂನ್ 20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅಧಿವೇಶನದ ದಿನಾಂಕವನ್ನ ಅಂತಿಮಗೊಳಿಸಿದ್ದು ಜುಲೈ 15ರಿಂದ ಅಧಿವೇಶನ ಆರಂಭವಾಗಿ ಜುಲೈ 26 ರಂದು ಕೊನೆಗೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


