ಬೆಂಗಳೂರು: ಬೆಂಗಳೂರು ಕರಗ ಮಹೋತ್ಸವ ಏ.4ರಿಂದ 14ರವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 15ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.
ಫೆ.27ರಂದು ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4