ರಾಜಧಾನಿಯಲ್ಲಿ ಮಾವಿನ ಸೀಸನ್ ಲೇಟಾಗಿ ಆರಂಭವಾಗಿದ್ದು, ಮಳೆ ಬಂದ ನಂತರ ಸಿಲಿಕಾನ್ ಸಿಟಿ ಮಂದಿ ಬಗೆ ಬಗೆಯ ಹಣ್ಣುಗಳನ್ನ ಸವಿಯುತ್ತಿದ್ದಾರೆ. ಈ ಮಧ್ಯೆ ಲಾಲ್ ಬಾಗ್ ನಲ್ಲಿಯು ಈ ವರ್ಷ ಮಾವಿನ ಮೇಳ ನಡೆಸುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಸದ್ಯ ಮೇಳಕ್ಕೆ ಡೇಟ್ ಕೂಡ ಫಿಕ್ಸ್ ಮಾಡಿದ್ದಾರೆ.
ಇದೇ ಮೇ. 24 ರಿಂದ ಜೂನ್ 10 ರವರೆಗೂ ಮಾವು ಹಾಗೂ ಹಲಸಿನ ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಈ ಮಾವಿನ ಮೇಳಕ್ಕೆ ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸಲಿದ್ದಾರೆ.
ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಜೊತೆಗೆ ಉಪ್ಪಿನಕಾಯಿಗೆ ಬಳಸುವ ಆಮ್ಲೆಟ್, ಮಿಡಿ ಮಾವು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ. ಇನ್ನು ಐಐಎಚ್‌ಆರ್, ಜಿಕೆವಿಕೆ ಮತ್ತಿತರ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದ ನಾನಾ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತೆ. ಈ ವರ್ಷದ ಮೇಳದಲ್ಲಿ ಬಾದಾಮಿ, ರಸಪುರಿ, ಸೇಂಧೂರ, ಮಲಗೋವ, ನೀಲಂ, ಮಲ್ಲಿಕಾ, ಆಮ್ರಪಾಲಿ, ಬಂಗನಪಲ್ಲಿ, ತೋತಾಪುರಿ, ಸಕ್ಕರೆಗುತ್ತಿ ಸೇರಿದಂತೆ ನಾನಾ ತಳಿಯ ಹಣ್ಣುಗಳು ಇರಲಿವೆ.
ಇನ್ನು ಪ್ರತಿವರ್ಷ ಮಾವಿನ ಸೀಸನ್ ನಲ್ಲಿ ರಾಜ್ಯದಲ್ಲಿ ಸುಮಾರು 15 ಲಕ್ಷ ಟನ್ ಮಾವು ಉತ್ಪಾದನೆಯಾಗಬೇಕಿತ್ತು. ಆದರೆ, ಮಳೆಯಿಲ್ಲದ ಪರಿಣಾಮ ಹಾಗೂ ಅಧಿಕ ತಾಪಮಾನದಿಂದಾಗಿ ಕೇವಲ 4-5 ಲಕ್ಷ ಟನ್ ನಷ್ಟು ಮಾವಿನ ಫಸಲು ಕಡಿಮೆ ಬಂದಿದೆ. ಹೀಗಾಗಿ ಈ ಬಾರಿ ಮೇಳದಲ್ಲಿ ದರ ಕೊಂಚ ಹೆಚ್ಚೇ ಇರಲಿದೆ. ಇನ್ನು, ಪ್ರತಿವರ್ಷ ಲಾಲ್ ಬಾಗ್ ನಲ್ಲಿ ಮ್ಯಾಂಗೋ ಮೇಳಕ್ಕೆ ಬರ್ತಿವಿ. ತುಂಬ ಚೆನ್ಮಾಗಿರುತ್ತೆ. ಈ ವರ್ಷವು ಮೇಳಕ್ಕೆ ಕಾಯ್ತಾ ಇದಿವಿ. ರೈತರಿಂದ ನೇರವಾಗಿ ಖರೀದಿ ಮಾಡಬಹುದು. ಜೊತೆಗೆ ಬೆಲೆ ಕೊಂಚ ಕಡಿಮೆ ಇರುತ್ತೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


