ಲೋಕಸಭೆ ಚುನಾವಣೆಗೆ ಇದೇ ಮಾರ್ಚ್ 14 ಅಥವಾ 15 ರಂದು ಘೋಷಣೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್‌ನೊಳಗೆ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಅಲ್ಲದೆ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯನ್ನು ಲೋಕಸಭೆ ಚುನಾವಣೆಯೊಂದಿಗೆ ಏಕಕಾಲದಲ್ಲಿ ನಡೆಸಬಹುದೇ ಎಂದು ನಿರ್ಣಯಿಸಲು ಕೇಂದ್ರ ಸಮಿತಿ ಕೇಳಿತ್ತು.
ಈ ಬೆನ್ನಲ್ಲೇ ಸಮಿತಿ ಸೋಮವಾರದಿಂದ ಬುಧವಾರದವರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಅದರ ನಂತರ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ತಕ್ಷಣವೇ ಬಹಿರಂಗಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಲೋಕಸಭೆ ಮಹಾ ಚುನಾವಣೆಗೆ ದಿನಾಂಕ ನಿಗದಿ ಜೊತೆಜೊತೆಗೆ ಈ ಸಲನೂ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೂ ಮುಹೂರ್ತ ನಿಗದಿ ಆಗಲಿದೆ.
ಅಷ್ಟೇ ಅಲ್ಲ 10 ವರ್ಷಗಳ ಬಳಿಕ ಜಮ್ಮು ಕಾಶ್ಮೀರ ವಿಧಾನಸಭೆಗೂ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಏಕೆಂದರೆ ಸೆಪ್ಟೆಂಬರ್ 2024ರೊಳಗೆ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸಬೇಕು ಅಂತ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಹೀಗಾಗಿ ಸೋಮವಾರದಿಂದ 3 ದಿನ ಜಮ್ಮು ಕಾಶ್ಮೀರಕ್ಕೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಟೀಂ ಭೇಟಿ ಕೊಡ್ತಿದ್ದಾರೆ..
ಬುಧವಾರದವರೆಗೂ ಜಮ್ಮು-ಕಾಶ್ಮೀರದಲ್ಲಿ ಆಯೋಗ ಪರಿಶೀಲನೆ ನಡೆಸ್ತಾರೆ. ಲೋಕಸಭೆ ಚುನಾವಣೆಗೂ ಮುನ್ನವೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ದಿಢೀರ್ ರಾಜಿನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಶೀಘ್ರದಲ್ಲೇ ಚುನಾವಣಾ ದಿನಾಂಕಗಳನ್ನು ಘೋಷಿಸಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296