ತಿಪಟೂರು: ಕಾಮುಕ ತಂದೆಯೊಬ್ಬ ತನ್ನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪರಿಣಾಮ 14 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಘಟನೆ ತಿಪಟೂರು ತಾಲೂಕಿನ ಹೊನ್ನವಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿ ಗರ್ಭ ಧರಿಸಿದ ಪರಿಣಾಮ ತಂದೆಯ ಅಮಾನಷ ಕೃತ್ಯ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕೃತ್ಯ ನಡೆದಿದೆ.
ಆರೋಪಿಯ ಕುಟುಂಬ ಎಂಟು ತಿಂಗಳ ಹಿಂದೆ ಕೂಲಿ ಕೆಲಸಕ್ಕಾಗಿ ಹೊರ ರಾಜ್ಯದಿಂದ ಹೊನ್ನವಳ್ಳಿಗೆ ಬಂದು ನೆಲೆಸಿತ್ತು. ಇತ್ತೀಚೆಗೆ ಬಾಲಕಿ ಪದೇ–ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಳು. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷೆ ವೇಳೆ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.
ಆಸ್ಪತ್ರೆ ಸಿಬ್ಬಂದಿ ವಿಚಾರಿಸಿದ ವೇಳೆ ತನ್ನ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ಹೇಳಿದ್ದಾಳೆ. ಕಾಮುಕ ತಂದೆಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q